

ಮಂಗಳೂರು: ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ಬಾಲಕನಿಗೆ ಥಳಿಸಿದ ಘಟನೆಗೆ ಸಂಬಂಧಿಸಿದ ಇದೀಗ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಘಟನೆ ಬಗ್ಗೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿದೆ. ಈ ರೀತಿ ಹಳೆಯ ವೀಡಿಯೋಗಳನ್ನು ಅದರ ಪೂರ್ವಾಪರ ಪರಿಶೀಲಿಸದೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ.

