

ಬೆಂಗಳೂರು: ಸರ್ಕಾರದ ಶೇಕಡಾ 17ರಷ್ಟು ವೇತನ ಹೆಚ್ಚಳ ಆದೇಶವನ್ನು ನೌಕರರ ಸಂಘ ಸ್ವಾಗತಿಸಿದ್ದು, ಈ ಮೂಲಕ ಮುಷ್ಕರವನ್ನು ವಾಪಸ್ ಪಡೆದುಕೊಂಡಿದೆ. 7ನೇ ವೇತನ (7th pay commission) ಆಯೋಗ ವರದಿ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ರಾಜ್ಯಾದ್ಯಂತ ಇಂದು (ಮಾರ್ಚ್ 01) ಮುಷ್ಕರ ನಡೆಸಿದ್ದರು. ಇದರಿಂದ ರಾಜ್ಯದಲ್ಲಿ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಿದ್ದು ಭಾರೀ ಸಮಸ್ಯೆಗಳು ಎದುರಾಗಿದ್ದವು. ಸದ್ಯ ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai), ರಾಜ್ಯ ನೌಕರರ (Karnataka Government Employees Strike) ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದರು. ಈ ಬೆನ್ನಲ್ಲೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಸುದ್ದಿಗೋಷ್ಠಿ ನಡೆಸಿ ಮುಷ್ಕರ ವಾಪಾಸ್ ಪಡೆದಿರುವುದಾಗಿ ಘೋಷಿಸಿದ್ದಾರೆ.

ಮುಷ್ಕರ ಹಿಂಪಡೆದ ರಾಜ್ಯ ಸರ್ಕಾರಿ ನೌಕರರ ಸಂಘ
ಶೇಕಡಾ 17ರಷ್ಟು ವೇತನ ಹೆಚ್ಚಿಸಿ ಸರ್ಕಾರದಿಂದ ಆದೇಶ ಹಿನ್ನೆಲೆ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಣೆ ಮಾಡಿದೆ. ತಕ್ಷಣದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ C.S.ಷಡಕ್ಷರಿ ಸೂಚಿಸಿದ್ದಾರೆ. ಹಾಗೂ ಕರ್ತವ್ಯ ಬಹಿಷ್ಕರಿಸಿದ್ದರಿಂದ ಜನರಿಗೆ ಆಗಿರುವ ತೊಂದರೆಗೆ ಕ್ಷಮೆಯಾಚಿಸಿದ್ದಾರೆ.

ನಿನ್ನೆ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದರು. 9 ಸಚಿವರು, ಸಿಎಸ್, ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಯಿತು. ಸರ್ಕಾರ, ಸರ್ಕಾರಿ ನೌಕರರು ತದ್ವಿರುದ್ಧವಾಗಿ ಹೋಗುವುದು ಬೇಡ. ಇಬ್ಬರೂ ಒಟ್ಟಾಗಿ ಹೋಗಬೇಕು ಎಂದು ಸಿಎಂ ಮನವಿ ಮಾಡಿದರು. ವೇತನ ಭತ್ಯೆ ತಾತ್ಕಾಲಿಕ ಪರಿಹಾರಕ್ಕೆ ಸಮ್ಮತಿ ನೀಡಿದ್ದೇವೆ. ಎನ್ಪಿಎಸ್ನ್ನು ಒಪಿಎಸ್ ಮಾಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಒಪಿಎಸ್ ಮಾಡುವ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಚರ್ಚಿಸಬೇಕು. ಬೇರೆ ರಾಜ್ಯಗಳಲ್ಲಿ ಒಪಿಎಸ್ ಜಾರಿ ಬಗ್ಗೆ ಸಮಿತಿ ರಚಿಸಿ ಪರಿಶೀಲನೆ ಮಾಡಲಾಗುತ್ತಿದೆ. ಸಿಎಂ ಬೊಮ್ಮಾಯಿ ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸಿದ್ದಾರೆ. ಹಾಗೂ 2 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸಮಿತಿಗೆ ಸಿಎಂ ಸೂಚನೆ ನೀಡಿದ್ದಾರೆ.
ಶಿಕ್ಷಕರ ವರ್ಗಾವಣೆ ಬಗ್ಗೆ ಶೀಘ್ರ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ರಾಜ್ಯ ಸರ್ಕಾರ ಶೇಕಡಾ 17ರಷ್ಟು ಫಿಟ್ಮೆಂಟ್ ನೀಡಿದ್ದಾರೆ. ನಮ್ಮ ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರ ಸಮ್ಮತಿಸಿದೆ. ಹೋರಾಟಕ್ಕೆ ಕರೆ ನೀಡಿದ 6 ಗಂಟೆಯಲ್ಲಿ ಸರ್ಕಾರ ಸ್ಪಂದಿಸಿದೆ. 40 ಬೇಡಿಕೆಗಳ ಈಡೇರಿಕೆಗೆ ನಾವು ಒತ್ತಾಯ ಮಾಡಿದ್ದೆವು. ಆದರೆ ರಾಜ್ಯ ಸರ್ಕಾರ ಪ್ರಮುಖ ಬೇಡಿಕೆಗಳನ್ನು ಈಡೇರಿಸಿದೆ. ರಾಜ್ಯ ಸರ್ಕಾರ ಉಳಿದ ಬೇಡಿಕೆ ಈಡೇರಿಸುವ ವಿಶ್ವಾಸವಿದೆ. ಹಾಗಾಗಿ ಮುಷ್ಕರ ಹಿಂಪಡೆದು ಕೆಲಸಕ್ಕೆ ಹಾಜರಾಗಬೇಕು ಎಂದರು.