

ಮಂಗಳೂರು:ಸುರತ್ಕಲ್ ಕಾಟಿಪಳ್ಳದ ಅಬ್ದುಲ್ ಜಲೀಲ್ ಕೊಲೆ ಪ್ರಕರಣದ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಜಲೀಲ್ ಕೊಲೆ ಪ್ರಕರಣದ ಮೂರನೇ ಆರೋಪಿ ಪವನ್ ಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ
ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.

ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಜಲೀಲ್(45) ಎಂಬುವರಿಗೆ ದುಷ್ಕರ್ಮಿಗಳು ಡಿ.24ರಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು.ಪ್ರಕರಣ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು.

ದೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ , ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ ಎಸ್.ಕೆ ಮತ್ತು ಹರ್ಷಿತ್ ವಾದಿಸಿದರು.