

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madalu Veerupakshappa) ಹಾಗೂ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದೆ. ಮತ್ತೊಂದೆಡೆ ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಅಂದ್ರೆ ಭ್ರಷ್ಟ ಜನತಾ ಪಾರ್ಟಿ ಅಂತಾ ಕರೆಯಬೇಕಾಗುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಭ್ರಷ್ಟ ಸರ್ಕಾರ ನೋಡಿರಲಿಲ್ಲ. ಬಿಜೆಪಿ ಅಂದ್ರೆ ಸುಳ್ಳಿನ ಫ್ಯಾಕ್ಟರಿ. ಮೋದಿ, ಅಮಿತ್ ಶಾ, ಕಟೀಲು, ಬೊಮ್ಮಾಯಿ ಬರೀ ಸುಳ್ಳು ಹೇಳ್ತಾರೆ. ನಾವು ಭ್ರಷ್ಟಾಚಾರ ಆರೋಪ ಮಾಡಿದ್ರೆ ದಾಖಲಾತಿ ಕೊಡಿ ಅಂತಾರೆ. ಅಲ್ಲದೇ ಹಿಂದಿನ ಸರ್ಕಾರದಲ್ಲೂ ಭ್ರಷ್ಟಾಚಾರ ನಡೆದಿತ್ತು ಅಂತಾರೆ. PSI ನೇಮಕಾತಿ ಹಗರಣದಲ್ಲಿ ಎಡಿಜಿಪಿ ಸುಮ್ಮನೇ ಜೈಲಿಗೆ ಹೋದ್ರಾ? ಜಿಲ್ಲಾಧಿಕಾರಿ ಜೈಲಿಗೆ ಹೋಗಿದ್ದ, ಇದಕ್ಕಿಂತ ಇವರಿಗೆ ಸಾಕ್ಷ್ಯ ಬೇಕಾ? ಈಶ್ವರಪ್ಪ ಹೆಸರು ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ. ಈ ವಿಚಾರಕ್ಕೆ ಈಶ್ವರಪ್ಪ ರಾಜೀನಾಮೆ ಕೊಟ್ಟ, ಇದಕ್ಕಿಂತ ಸಾಕ್ಷ್ಯಬೇಕಾ? ಎಂದು ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸರು 8 ಕೋಟಿಗೂ ಹೆಚ್ಚು ಹಣ ಜಪ್ತಿ ಮಾಡಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಅರೆಸ್ಟ್ ಮಾಡಬೇಕು. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ಕೊಡಬೇಕು. ಬಿಜೆಪಿಯವರು ದುಡ್ಡಿನಿಂದ ಚುನಾವಣೆ ಗೆಲ್ತೀವಿ ಅಂದುಕೊಂಡಿದ್ದಾರೆ. ಪ್ರತಿ ಕ್ಷೇತ್ರಕ್ಕೆ 100 ಕೋಟಿಯಷ್ಟು ಖರ್ಚು ಮಾಡಲು ಹೊರಟಿದ್ದಾರೆ. ರಾಜ್ಯದ ಜನರೇ ಬಿಜೆಪಿಯವರಿಗೆ ಪಾಠ ಕಲಿಸಬೇಕು. ನಾನು ಸಿಎಂ ಆಗಿದ್ದಾಗ ಆರೋಪ ಬಂದಾಗ ತನಿಖೆ ಮಾಡಿಸಿದ್ದೇನೆ ಎಂದರು.