

ಬೆಂಗಳೂರು: ಪಿಯುಸಿ ಪರೀಕ್ಷೆ (PUC Exam) ಇರುವ ಕಾರಣ ಮಾರ್ಚ್ 9 ರಂದು ಬೆಳಗ್ಗೆ 9 ಗಂಟೆಗೆ ಕರೆದಿದ್ದ ಕರ್ನಾಟಕ ಬಂದ್ (Karnataka Band) ವಾಪಸ್ ಪಡೆದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗ ರೆಡ್ಡಿ (Ramalinga Reddy) ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಮೊದಲು ಭ್ರಷ್ಟಾಚಾರ ವಿರೋಧಿಸಿ ನಾಳೆ ಕಾಂಗ್ರೆಸ್ನಿಂದ 2 ಗಂಟೆಗಳ ಕಾಲ ಬಂದ್ ಮಾಡಲು ನಿರ್ಧರಿಸಿದ್ದೆವು. ಆದರೆ ನಾಳೆ ಪಿಯುಸಿ ಪರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ಮಕ್ಕಳಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕೆ ವಾಪಸ್ ಪಡೆದಿದ್ದೇವೆ ಎಂದು ಹೇಳಿದರು.
