

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಈ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ಕಣ್ಣೂರು ಜಿಲ್ಲೆಯ ಕಕ್ಕಯಂಗಡದಲ್ಲಿರುವ ಮುಝಕುನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಣ್ಣೂರಿನಲ್ಲಿ ಸಂಭವಿಸಿರುವುದು ಬಾಂಬ್ ಸ್ಫೋಟ, ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸರು ಸ್ಪಷ್ಟ ಪಡಿಸಿದ್ದಾರೆ. ಆದ್ರೆ ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನಂತರವೇ ಮತ್ತಷ್ಟು ಮಾಹಿತಿ ಹೊರ ಬರಬೇಕಿದೆ. ಪೊಲೀಸರ ಪ್ರಕಾರ, ಸ್ಫೋಟದಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
