Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ

editor tv by editor tv
March 21, 2023
in ರಾಜ್ಯ, ಸುದ್ದಿ
0
ಮುಸ್ಲಿಂ ಬೃಹತ್ ಸಮಾವೇಶ ಮಾಡಿದ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ
1.9k
VIEWS
Share on FacebookShare on TwitterShare on Whatsapp

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸುವ ಮೂಲಕ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು

ಸೋಮವಾರದಂದು ಮೂಡಲಗಿ ಪಟ್ಟಣದ ತಹಶೀಲ್ದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ, ಈ ಸಮಾಜ ಶಿಕ್ಷಣದಲ್ಲಿ ಕ್ರಾಂತಿ ಮಾಡಬೇಕಿದೆ. ಬಹುತೇಕ ಎಲ್ಲ ಉದ್ಯೋಗಗಳಲ್ಲಿ ಗುರುತಿಸಿಕೊಂಡಿರುವ ಈ ಸಮಾಜದವರು ಶ್ರಮ ಜೀವಿಗಳು. ಯಾವುದೇ ಕೆಲಸವನ್ನು ಮಾಡಲು ಹಿಂಜರಿಯುವದಿಲ್ಲ. ನನಗೆ ಕೇವಲ ಒಂದು ಸಮುದಾಯದ ಮತವನ್ನು ಪಡೆದು ಆಯ್ಕೆಯಾಗದೇ ಎಲ್ಲ ಸಮುದಾಯಗಳು ನನಗೆ ಬೆಂಬಲ ಕೊಟ್ಟು ಆಶೀರ್ವಾದ ಮಾಡಿದಾಗಲೇ ಖುಷಿಯಾಗುತ್ತದೆ. ಪ್ರತಿ ಸಮಾಜಗಳ ಅಭ್ಯುದಯಕ್ಕೆ ದುಡಿಯುತ್ತಿದ್ದೇನೆ. ಅದರಂತೆ ಎಲ್ಲ ಸಮಾಜಗಳು ಕೂಡ ನನ್ನ ಬೆನ್ನಿಗಿವೆ. ಸತತವಾಗಿ ಆಶೀರ್ವಾದ ಮಾಡುತ್ತಾ ಬರುತ್ತಿದ್ದಾರೆ. ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ನನ್ನ ಶತ ಕೋಟಿ ನಮನಗಳನ್ನು ಸಲ್ಲಿಸುತ್ತೇನೆಂದರು.

ಮುಸ್ಲಿಂ ಸಮಾಜದ ಮಕ್ಕಳು ಸುಶಿಕ್ಷಿತರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಶಾಲೆಗೆ ಹೋಗುವ ಮಕ್ಕಳನ್ನು ಎಂದಿಗೂ ಬಿಡಿಸಬೇಡಿ, ಶಿಕ್ಷಣವನ್ನು ಮೊಟುಕುಗೊಳಿಸಬೇಡಿ. ಇಂದು ಪ್ರತಿ ಮಕ್ಕಳು ಶೇಕಡಾ ೯೦ಕ್ಕಿಂತ ಹೆಚ್ಚು ಅಂಕಗಳನ್ನು ಪಡೆಯುತ್ತಿದ್ದಾರೆಂದರೆ ಅದಕ್ಕೆ ಶಿಕ್ಷಣದ ಬದಲಾವಣೆಯೇ ಕಾರಣ. ಸಮಾಜದಲ್ಲಿ ಶಿಕ್ಷಣದಿಂದ ನಾವು ಬದಲಾವಣೆ ತರಬೇಕಾಗಿದೆ. ಇದಕ್ಕೆ ಪಾಲಕ-ಪೋಷಕರು ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು.

ಅಧ್ಯಕ್ಷತೆಯನ್ನು ಹಿರಿಯ ಮುಖಂಡ ಜನಾಬ್ ಎಚ್.ಡಿ.ಮುಲ್ಲಾ ವಹಿಸಿದ್ದರು. ವೇದಿಕೆಯಲ್ಲಿ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಮುಸ್ಲಿಂ ಸಮಾಜದ ಮುಖಂಡರಾದ ಅಜೀಜ್ ಡಾಂಗೆ, ಮಲ್ಲಿಕ ಹುಣಶ್ಯಾಳ, ಅನ್ವರ ನದಾಫ, ಹುಸೇನಸಾಬ ಶೇಖ, ಅಬ್ದುಲ್‌ಗಫಾರ ಡಾಂಗೆ, ನನ್ನುಸಾಬ ಶೇಖ, ರಾಜೇಸಾಬ ಖೆಮಲಾಪೂರ, ಅಮೀನಸಾಬ ಯಳ್ಳೂರ, ಹಾಸಿಮ್ ನಗಾರ್ಚಿ, ದಸ್ತಗೀರಸಾಬ ಶಿರಹಟ್ಟಿ, ನಿಜಾಮಸಾಬ ಜಮಾದಾರ, ರಿಯಾಜ ಯಾದವಾಡ, ಇಕ್ಬಾಲ್ ಸರ್ಕಾವಸ್, ರಸೂಲ ಮಿರ್ಜಾನಾಯಿಕ, ರಾಜು ಬಳಿಗಾರ, ಹಾಜೀಸಾಬ ನದಾಫ, ಬಂದೇನವಾಜ ನದಾಫ, ಶಾನೂರ ಮೊಘಲ, ಇಮಾಮ ಮೋಮಿನ, ಇಸ್ಮಾಯಿಲ್ ಲಾಡಖಾನ, ಎಮ್.ಎಸ್.ದಂತಾಳೆ, ಮಕ್ತುಮಸಾಬ ಖಾಜಿ, ಸೇರಿದಂತೆ ಅರಭಾವಿ ಕ್ಷೇತ್ರದ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Previous Post

ಚರಂಡಿ ಸ್ವಚ್ಛಗೊಳಿಸುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರು ಸಾವು

Next Post

Chetan Ahimsa: ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​

Next Post
Chetan Ahimsa: ಹಿಂದುತ್ವದ ಬಗ್ಗೆ  ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​

Chetan Ahimsa: ಹಿಂದುತ್ವದ ಬಗ್ಗೆ ಪೋಸ್ಟ್​ ಮಾಡಿದ ನಟ ‘ಆ ದಿನಗಳು’ ಚೇತನ್ ಅರೆಸ್ಟ್​

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.