

ಚೆನೈ: ಇತ್ತೀಚೆಗೆ ವೆಲ್ಲೂರು ಕೋಟೆಗೆ (Vellore fort) ಭೇಟಿ ನೀಡಿದ್ದ ಮಹಿಳೆಯೊಬ್ಬರ ಹಿಜಬ್ (Hijab) ತೆಗೆಯುವಂತೆ ಒತ್ತಾಯಿಸಿ ವೀಡಿಯೋ ಮಾಡಿದ್ದ ದುಷ್ಕರ್ಮಿಗಳನ್ನು ತಮಿಳುನಾಡಿನ (Tamil Nadu) ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಮಾ.27ರಂದು ನಡೆದಿದ್ದ ಪ್ರಕರಣದ ಬೆನ್ನು ಹತ್ತಿದ್ದ ಪೊಲೀಸರು, ಇಮ್ರಾನ್ ಬಾಷಾ (22), ಅಶ್ರಫ್ ಬಾಷಾ (20), ಮೊಹಮ್ಮದ್ ಫೈಜಲ್ (23), ಸಂತೋಷ್ (23), ಇಬ್ರಾಹಿಂ ಬಾಷಾ (24) ಹಾಗೂ ಪ್ರಶಾಂತ್ (20) ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೋರ್ವ ಅಪ್ರಾಪ್ತನನ್ನು ಬಾಲ ಮಂದಿರದಲ್ಲಿ ಇರಿಸಲಾಗಿದೆ. ಬಂಧಿತರೆಲ್ಲ ಆಟೋ ಚಾಲಕರಾಗಿದ್ದು, ಪ್ರವಾಸಕ್ಕೆ ಬಂದಿದ್ದ ಮೂವರು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

ಸಾಮಾಜಿಕ ಜಾಲತಾಣದಲ್ಲಿ (Social media) ಹರಿದಾಡುತ್ತಿರುವ ವೀಡಿಯೋವನ್ನು ಹಂಚಿಕೊಳ್ಳದಂತೆ ಪೊಲೀಸರು ಮನವಿ ಮಾಡಿದ್ದಾರೆ. ಘಟನೆಯ ನಂತರ ಕೋಟೆಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಹಾಯ ಕೇಂದ್ರವನ್ನು ಶಾಶ್ವತಗೊಳಿಸಲಾಗುವುದು ಎಂದು ವೆಲ್ಲೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (Superintendent of Police) ಎಸ್.ರಾಜೇಶ್ ಕಣ್ಣನ್ ತಿಳಿಸಿದ್ದಾರೆ.

ಆರೋಪಿಗಳನ್ನು ವಿಚಾರಣೆಗೆ ಗುರಿಪಡಿಸಲಾಗಿದ್ದು, ತನಿಖೆಯ ನಂತರ ಹೆಚ್ಚಿನ ಮಾಹಿತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.
