

ಬೆಳಗಾವಿ: ಸಕ್ಕರೆನಾಡು ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಿದ್ದು, ಇಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಮುಖ ಮೂರು ಪಕ್ಷಗಳು ಹವಣಿಸುತ್ತಿವೆ. ಸದ್ಯ ವಿಧಾನಸಭಾ ಚುನಾವಾಣೆ ಹಿನ್ನೆಲೆ ಎರಡು ರಾಷ್ಟ್ರೀಯ ಪಕ್ಷಗಳು ಬೆಳಗಾವಿ ಮೇಲೆ ಹದ್ದಿನ ಕಣ್ಣಿರಿಸಿವೆ. ಬಿಜೆಪಿ ನಿನ್ನೆ (ಏ.11) ರಾತ್ರಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಜಿಲ್ಲೆಯ 18 ಕ್ಷೇತ್ರಗಳಿಗೆ ಟಿಕೆಟ್ ಹಂಚಿಕೆ ಮಾಡಿದೆ. ಆದರೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಇಬ್ಬರು ಹಾಲಿ ಶಾಸಕರು ಸೇರಿದಂತೆ 8 ಜನ ಆಕಾಂಕ್ಷಿಗಳಿಗೆ ಟಿಕೆಟ್ ತಪ್ಪಿದ್ದು, ಇವರು ಬಂಡಾಯ ಏಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ರಾಜ್ಯ ವಿಧಾನಸಭೆ ಚುನಾವಣೆಯ ಅಸಲಿ ಅಖಾಡ ಈಗ ಸಿದ್ದವಾಗಿದ್ದು, ಮೂರು ರಾಜಕೀಯ ಪಕ್ಷಗಳು ಭಾಗಶಃ ಅಭ್ಯರ್ಥಿಗಳನ್ನು ಘೋಷಣೆ ಮಾಡಿವೆ. ಬಿಜೆಪಿ ಮತ್ತು ಜೆಡಿಎಸ್ ತಲಾ ಒಂದು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಎರಡು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಜೆಪಿ ಕಳೆದ 1 ವಾರಗಳ ಅಳೆದು ತೂಗಿ 189 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಈ ಪಟ್ಟಿಯಲ್ಲಿ 52 ಜನ ಹೊಸಬರಿಗೆ ಮಣೆ ಹಾಕಲಾಗಿದೆ. 32 ಕ್ಷೇತ್ರಗಳಿಗೆ ಟಿಕೆಟ್ ಇನ್ನೂ ಘೋಷಣೆ ಮಾಡಬೇಕಿದೆ. ಇಬ್ಬರು ನಾಯಕರಿಗೆ 2 ಕ್ಷೇತ್ರಗಳ ಟಿಕೆಟ್ ನೀಡಿದೆ. ಇದು ಒಂದಡೆಯಾದರೇ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸೇರಿದಂತೆ ಹಾಲಿ ಶಾಸಕರು ಮತ್ತು ಬಿಜೆಪಿ ಮುಖಂಡರು ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ವಂಚಿತರಾಗಿದ್ದು, ಬಂಡಾಯದ ಬಾವುಟ ಹಾರಿಸುವ ಸಾಧ್ಯತೆ ಇದೆ. ಇನ್ನು ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೇಟ್ಟರ್ ಅವರ ಟಿಕೆಟ್ ಸಸ್ಪೆನ್ಸ್ ಆಗಿ ಉಳಿದಿದೆ

