
ಕರ್ನಾಟಕದ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸ ಇರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಎಂಸಿಸಿ ಬ್ಯಾಂಕ್ ಲಿಮಿಟೆಡ್ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿಲ್ಲ. ತನ್ನ ಕಾರ್ಯ ಕ್ಷೇತ್ರವನ್ನು ಐದು ಜಿಲ್ಲೆಗಳಿಗೆ ವಿಸ್ತರಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬ್ಯಾಂಕ್ ಅಧ್ಯಕ್ಷರಾದ ಅನಿಲ್ ಲೋಬೊ ತಿಳಿಸಿದ್ದಾರೆ. ಅವರು ಇಂದು ಬ್ಯಾಂಕಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ವಿತ್ತೀಯ ವರ್ಷದಲ್ಲಿ 12.20 ಕೋಟಿ ರೂಪಾಯಿ ಲಾಭ ಗಳಿಸಿದ್ದು ಇತ್ತೀಚಿನ ವರ್ಷಗಳಲ್ಲಿ ಪ್ರಪ್ರಥಮ ಬಾರಿಗೆ 1.37 ಎನ್ ಪಿಎ ದಾಖಲಿಸಿದೆ.

ಆಡಳಿತ ಮಂಡಳಿ, ಆಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ ಈ ಸಾಧನೆ ಸಾಧ್ಯವಾಗಿದೆ. ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಹೀಗೆ ಐದು ಜಿಲ್ಲೆಗಳಿಗೆ ವಿಸ್ತರಿಸಿದೆ. ಶೀಘ್ರದಲ್ಲೇ ಈ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದರು.

