

ಉಡುಪಿ: ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 50 ಲಕ್ಷ ರೂ. ನಗದನ್ನು ಜಿಲ್ಲೆಯ ಕಾರ್ಕಳ ತಾಲೂಕಿನ ಸಾಣೂರು ಚೆಕ್‌ಪೋಸ್ಟ್ ಪೊಲೀಸರು ಜಪ್ತಿ ಮಾಡಿದ್ದಾರೆ. ದಾಖಲೆ ಇಲ್ಲದೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿದ್ದರು. ಚುನಾವಣಾಧಿಕಾರಿ ಮದನ್ ಮೋಹನ್ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ಬ್ಯಾಂಕ್ ಲೆಟರ್ ವಶಪಡಿಸಿಕೊಂಡಿದ್ದಾರೆ. ಸಾಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಬಸ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಲಕ್ಷ ರೂ. ನಗದನ್ನು ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್‌ಪೋಸ್ಟ್ ಕೊಗನೊಳ್ಳಿ ಚೆಕ್‌ಪೋಸ್ಟ್‌ನಲ್ಲಿ ಬಸ್‌ನಲ್ಲಿ ತಪಾಸಣೆ ವೇಳೆ ಪತ್ತೆ ಆಗಿದೆ. ಮಹಾರಾಷ್ಟ್ರದ ಕೊಲ್ಹಾಪುರದಿಂದ ನಿಪ್ಪಾಣಿಗೆ ಬಸ್ ಆಗಮಿಸುತ್ತಿತ್ತು. ತಪಾಸಣೆ ವೇಳೆ ಮಹಾರಾಷ್ಟ್ರ ನೀರಾವರಿ ಇಲಾಖೆ ನಿವೃತ್ತ ಅಧಿಕಾರಿ ಅಣ್ಣಾಸಾಹೇಬ್ ಪಾಟೀಲ್ ಬಳಿ 8 ಲಕ್ಷ ಹಣ ಪತ್ತೆ ಆಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿಪ್ಪಾಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


