Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ಕಾರ್ಯಕರ್ತರ ಪ್ರೀತಿ, ವಿಶ್ವಾಸದಿಂದ ಅಭೂತಪೂರ್ವ ಜಯಕ್ಕೆ ನಾಮಪತ್ರ ಸಲ್ಲಿಕೆಯಂದು ಸೇರಿರುವ ಜನಸಾಗರವೇ ಸಾಕ್ಷಿ – ಕಾಮತ್

editor tv by editor tv
April 17, 2023
in ಕರಾವಳಿ, ಸುದ್ದಿ
0
ಕಾರ್ಯಕರ್ತರ ಪ್ರೀತಿ, ವಿಶ್ವಾಸದಿಂದ ಅಭೂತಪೂರ್ವ ಜಯಕ್ಕೆ ನಾಮಪತ್ರ ಸಲ್ಲಿಕೆಯಂದು ಸೇರಿರುವ ಜನಸಾಗರವೇ ಸಾಕ್ಷಿ – ಕಾಮತ್
1.9k
VIEWS
Share on FacebookShare on TwitterShare on Whatsapp

ಮಂಗಳೂರಿನ ನೂರಕ್ಕೂ ಮಿಕ್ಕಿ ದೇವಸ್ಥಾನ, ದೈವಸ್ಥಾನ, ಗರಡಿಗಳಲ್ಲಿ ಪೂಜೆ ಸಲ್ಲಿಸಿ ಮಗಳೂರು ನಗರ ದಕ್ಷಿಣದಲ್ಲಿ ನನ್ನ ಗೆಲುವಿಗಾಗಿ ಪ್ರಾರ್ಥಿಸಿ ಪ್ರಸಾದ ತಂದು ನನಗೆ ನೀಡಿರುವ ಎಲ್ಲಾ ಹಿರಿಯರಿಗೆ, ಮುಖಂಡರಿಗೆ ಧನ್ಯವಾದಗಳು. ಒಂದು ದಿನದ ಹಿಂದೆಯಷ್ಟೇ ಮಾಹಿತಿ ಸಿಕ್ಕಿದರೂ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಕಾರ್ಯಕರ್ತ ಬಂಧುಗಳಿಗೆ ವಂದನೆಗಳು. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ 4000 ಕೋಟಿ ರೂ ಮಿಕ್ಕಿ ಅನುದಾನ ತಂದು ನಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಮಾಡಲಾಗಿದೆ. ಇನ್ನು ಸಾಕಷ್ಟು ಅಭಿವೃದ್ಧಿ ಮಾಡಲಿದ್ದು, 2025-26 ರ ಒಳಗೆ ಮಂಗಳೂರು ಅಭಿವೃದ್ಧಿಯ ನಿಟ್ಟಿನಲ್ಲಿ ಹೊಸ ರೂಪ ಪಡೆದುಕೊಳ್ಳಲಿದೆ. ಕುದ್ರೋಳಿ ದೇವಸ್ಥಾನದಲ್ಲಿ ಪ್ರತಿ ಬಾರಿ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸುವ ಸಂಪ್ರದಾಯ ಪಾಲಿಸಿದ್ದೇನೆ. ಅದೇ ರೀತಿಯಲ್ಲಿ ಕದ್ರಿ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ರಥಬೀದಿ ವೆಂಕಟರಮಣ ದೇವಸ್ಥಾನ, ಬಜಿಲಕೇರಿ ಮುಖ್ಯಪ್ರಾಣ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಇಂದಿನ ನಾಮಪತ್ರ ಸಲ್ಲಿಸುವಾಗ ಸೇರಿದ ಜನಸ್ತೋಮವನ್ನು ನೋಡುವಾಗ ಇದು ಗೆಲುವಿನ ನಂತರದ ವಿಜಯಯಾತ್ರೆಯಂತೆ ಕಂಗೊಳಿಸುತ್ತಿದೆ. ರಾಜ್ಯಾಧ್ಯಕ್ಷರೂ, ನೆಚ್ಚಿನ ಸಂಸದರಾದ ನಳಿನ್ ಕುಮಾರ್ ಕಟೀಲು ಅವರು ಕುದ್ರೋಳಿ ದೇವಸ್ಥಾನಕ್ಕೆ ಆಗಮಿಸಿ ವಿಜಯ ಯಾತ್ರೆಗೆ ಶುಭ ಕೋರಿದ್ದಾರೆ. ನಮ್ಮ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಸೇರಿರುವುದಕ್ಕೆ ಸರ್ವರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಅಭ್ಯರ್ಥಿ ಡಿ ವೇದವ್ಯಾಸ ಕಾಮತ್ ಹೇಳಿದರು.

ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಪುಷ್ಪಗಳಿಂದ ಸಿಂಗರಿಸಿದ ಜೀಪಿನಲ್ಲಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರನ್ನು ಕುದ್ರೋಳಿಯಿಂದ ಲಾಲ್ ಭಾಗ್ ತನಕ ಕರೆದೊಯ್ಯಲಾಯಿತು. ಪಾದಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರು ನಗರ ದಕ್ಷಿಣದಲ್ಲಿ ವೇದವ್ಯಾಸ ಕಾಮತ್ ಮಾಡಿರುವ ಅಭಿವೃದ್ಧಿಯನ್ನು ಜನಮೆಚ್ಚಿಕೊಂಡಿದ್ದಾರೆ. ಅವರ ಗೆಲುವು ಇಲ್ಲಿಂದಲೇ ಮುಂದುವರೆಯಲಿದೆ. ಕೇಂದ್ರ, ರಾಜ್ಯ ಸರಕಾರ ಭರಪೂರ ಅನುದಾನ ನೀಡಿ ಮಂಗಳೂರು ದಕ್ಷಿಣದ ಅಭಿವೃದ್ಧಿಗೆ ತುಂಬಾ ಸಹಕಾರ ನೀಡಿದೆ. ನಿತ್ಯ ಜನರ ನಡುವೆ ಇರುವ ನಾಯಕನಾಗಿ ವೇದವ್ಯಾಸ ಕಾಮತ್ ಗುರುತಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ ಪರ ವಾತಾವರಣ ಇದ್ದು, ಎಲ್ಲಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ರಾಜ್ಯದಲ್ಲಿ ನಮ್ಮ ಸರಕಾರ ನಿಚ್ಚಳ ಬಹುಮತ ಗಳಿಸಲಿದೆ ಎಂದು ತಿಳಿಸಿದರು.
ಪಾದಯಾತ್ರೆಯಲ್ಲಿ ಚೆಂಡೆ ವಾದನ, ಕಲ್ಲಡ್ಕ ಬೊಂಬೆಗಳು, ಹಾಡುಗಳು ಕಾರ್ಯಕರ್ತರ ಖುಷಿಯನ್ನು ಹೆಚ್ಚಿಸಿದವು. ವೇದವ್ಯಾಸ ಕಾಮತ್ ಅವರನ್ನು ಮೆಚ್ಚಿ ರಚಿಸಲಾದ ವಿಶೇಷ ಹಾಡಿಗೆ ಕಾರ್ಯಕರ್ತರು ಹೆಜ್ಜೆ ಹಾಕುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ಅಲ್ಲಲ್ಲಿ ಉಚಿತವಾಗಿ ಮಜ್ಜಿಗೆ, ನೀರಿನ ವ್ಯವಸ್ಥೆ ಮಾಡಲಾಗಿತ್ತು.

ನಾಮಪತ್ರ ಸಲ್ಲಿಸುವಾಗ ಸಂಸದ ನಳಿನ್ ಕುಮಾರ್ ಕಟೀಲ್, ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಸಂಚಾಲಕ ನಿತಿನ್ ಕುಮಾರ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮಂಡಲ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ, ವಕೀಲ ರವೀಂದ್ರ ಕುಮಾರ್, ಮಾಜಿ ವಿಧಾನಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಪ್ರಮುಖರಾದ ಉಮಾನಾಥ್ ಅಮೀನ್, ಸಿಎ ಗೌತಮ್ ಪೈ ಉಪಸ್ಥಿತರಿದ್ದರು. ಪಾದಯಾತ್ರೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ್ ಮೂಡಬಿದಿರೆ, ಚುನಾವಣಾ ಪ್ರಭಾರಿ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ರೂಪಾ ಡಿ ಬಂಗೇರ, ಪುರಂದರ ಜಪ್ಪಿನಮೊಗರು, ಮಂಡಲ ಉಪಾಧ್ಯಕ್ಷರಾದ ರಮೇಶ್ ಕಂಡೆಟ್ಟು, ದೀಪಕ್ ಪೈ, ಅಜಯ್ ಕುಲಶೇಖರ್, ರಮೇಶ್ ಹೆಗ್ಡೆ, ಪಾಲಿಕೆಯ ಸದಸ್ಯರು, ಸಮುದಾಯದ ಪ್ರಮುಖರು, ವಿವಿಧ ಕ್ಷೇತ್ರದ ಗಣ್ಯರು, ಉದ್ಯಮಿಗಳು, ಸಂಘ ಸಂಸ್ಥೆಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

ಬಂಟ್ವಾಳ : ಬೃಹತ್ ಕಾಲ್ನಡಿಗೆಯ ಜಾಥಾ ಮೂಲಕ ಆಗಮಿಸಿ SDPI ಅಭ್ಯರ್ಥಿ ಇಲ್ಯಾಸ್ ತುಂಬೆ ಅವರಿಂದ ನಾಮಪತ್ರ ಸಲ್ಲಿಕೆ

Next Post

ನನ್ನ ಮತ್ತು ಮಾಜಿ ಸಚಿವ ಅಭಯಚಂದ್ರರ ನಡುವೆ ಯಾವುದೇ ಅಸಮಾಧಾನವಿಲ್ಲ. ಕೆಲವರು ನಮ್ಮ ಬಗ್ಗೆ ಅಪಪ್ರಚಾರ ಮಾಡಿ ಲಾಭಗಳಿಸಲೆತ್ನಿಸಿದ್ದಾರೆ: ಮಿಥುನ್ ರೈ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.