

ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವವರಿಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಇಂದು ವರ್ಷದ ಮೊದಲ ಸೂರ್ಯಗ್ರಹಣ ಹಾಗೂ ಅಮವಾಸ್ಯೆ ಕೂಡ. ಇದನ್ನು , ನಂಬುವ ಬಹುತೇಕ ಮಂದಿ ಬುಧವಾರವೇ ನಾಮಪತ್ರ ಸಲ್ಲಿಸಿದ್ದಾರೆ
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ಸ್ಪರ್ಧಿಸುವವರಿಗೆ ಇಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಇನ್ನು ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. ಏಪ್ರಿಲ್ 21ರಿಂದ ನಾಮಪತ್ರಗಳ ಪರಿಶೀಲನೆ ನಡೆಯುತ್ತೆ. ಬಳಿಕ ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನ.

ಆದ್ರೆ ಕಡೆಗಳಿಗೆಯಲ್ಲಿ ಟಿಕೆಟ್ ಘೋಷಣೆಯಾದವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ನಿಪ್ಪಾಣಿ ತಹಶೀಲ್ದಾರ್ ಕಚೇರಿಗೆ ತೆರಳಿ ನಿಪ್ಪಾಣಿ ಬಿಜೆಪಿ ಅಭ್ಯರ್ಥಿ ಸಚಿವೆ ಶಶಿಕಲಾ ಜೊಲ್ಲೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಸಂಜೆ 5ಕ್ಕೆ ಬೃಹತ್ ಪ್ರಚಾರ ಸಭೆ ನಡೆಸಲಿದ್ದಾರೆ. ಕೆ.ಆರ್.ಪುರಂ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು, ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಸಿ.ಶ್ರೀನಿವಾಸ್, ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ ಅಭ್ಯರ್ಥಿ ಡಾ.ಬಿ.ಸಿ.ಮುದ್ದು ಗಂಗಾಧರ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಚಿಕ್ಕನಾಯಕನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿರಣ್ ಕುಮಾರ್, ಗುಬ್ಬಿ ಬಿಜೆಪಿ ಅಭ್ಯರ್ಥಿ ದಿಲೀಪ್ ಕುಮಾರ್, ಕುಣಿಗಲ್ ಬಿಜೆಪಿ ಅಭ್ಯರ್ಥಿ ಡಿ ಕೃಷ್ಣ ಕುಮಾರ್, ತುರುವೇಕೆರೆ ಜೆಡಿಎಸ್ ಅಭ್ಯರ್ಥಿ ಎಮ್ ಟಿ ಕೃಷ್ಣಪ್ಪ, ಶಿರಾ ಜೆಡಿಎಸ್ ಅಭ್ಯರ್ಥಿ ಆರ್ ಉಗ್ರೇಶ್, ಮಧುಗಿರಿ ಕಾಂಗ್ರೆಸ್ ಅಭ್ಯರ್ಥಿ ಕೆಎನ್ ರಾಜಣ್ಣ, ತುರುವೇಕೆರೆ ಬಿಜೆಪಿ ಅಭ್ಯರ್ಥಿ ಮಸಾಲ ಜಯರಾಂ, ಕುಣಿಗಲ್ ಜೆಡಿಎಸ್ ಅಭ್ಯರ್ಥಿ ಡಿ ನಾಗರಾಜಯ್ಯ, ತುಮಕೂರು ಗ್ರಾಮಾಂತರ ಕಾಂಗ್ರೆಸ್ ಅಭ್ಯರ್ಥಿ ಷಣ್ಮುಖಪ್ಪ ಯಾದವ್ ಸೇರಿದಂತೆ ಅನೇಕರು ಆಯಾ ತಾಲೂಕು ಚುನಾವಣಾಧಿಕಾರಿಗಳಿಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಸಂಡೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿಲ್ಪಾ ರಾಘವೇಂದ್ರ, ಬಳ್ಳಾರಿ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅನಿಲ್ ಲಾಡ್, ಹೂವಿನಹಡಗಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣಾ ನಾಯ್ಕ್, ಹಗರಿಬೊಮ್ಮನಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನೇಮಿರಾಜ ನಾಯ್ಕ್ ಸೇರಿ ಬಳ್ಳಾರಿ ಜಿಲ್ಲೆಯಲ್ಲಿಂದು ವಿವಿಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ. ಹಾಗೂ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ, ಕೆ ಆರ್ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ ರಾ ಮಹೇಶ್, ಟಿ ನರಸೀಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಸಿ ಮಹದೇವಪ್ಪ ಸೇರಿದಂತೆ ಮೈಸೂರಿನಲ್ಲಿ ನಾಮಪತ್ರ ಸಲ್ಲಿಕೆ ಜೋರಾಗಿದೆ.
