

ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಮಂಗಳೂರು ನಗರದ ಕಾವೂರು ಮೈದಾನದಲ್ಲಿ ಬಹಿರಂಗ ಸಮಾವೇಶ ನಡೆಸಿ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದವರೆಗೆ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದರು.
ಸಮಾವೇಶದಲ್ಲಿ ಮಾತಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್, ಕಾಂಗ್ರೆಸ್ ಪಕ್ಷ ನಿಂತ ನೀರಲ್ಲ ಹರಿಯುವ ನೀರು. ಹೀಗಾಗಿ ಇನಾಯತ್ ಅಲಿ ಅನ್ನುವ ಯುವ ನಾಯಕನಿಗೆ ಪಕ್ಷ ಟಿಕೆಟ್ ನೀಡಿದೆ ಎಂದರು.

ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ ಮಾತನಾಡಿ, ಬಿಜೆಪಿಯವರು ತಮ್ಮ ಅಭಿವೃದ್ಧಿಯನ್ನು ಹೇಳಿಕೊಂಡು ಮತ ಕೇಳುವುದಿಲ್ಲ. ಮೋದಿ, ರಾಮಮಂದಿರ, ಹಿಂದೂ ಧರ್ಮಕ್ಕೆ ಮತನೀಡಿ ಎಂದು ಕೇಳುತ್ತಾರೆ. ಎಲ್ಲಾ ಧರ್ಮ, ಜಾತಿ, ಪಂಗಡದ ಜನರು ಒಪ್ಪಿಕೊಂಡಿರುವ ಏಕೈಕ ಜತ್ಯತೀತ ಪಕ್ಷ ಅದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಎಂದರು.


ಇದೇ ವೇಳೆ ಮಾತಾಡಿದ ಅಭ್ಯರ್ಥಿ ಇನಾಯತ್ ಅಲಿ , ಪಕ್ಷ ನನ್ನ ಸೇವೆಯನ್ನು ಗುರುತಿಸಿ ಟಿಕೆಟ್ ನೀಡಿದೆ. ನನ್ನನ್ನು ಎಲ್ಲಾ ಸಮುದಾಯದ ಜನರು ಪ್ರೀತಿಯಿಂದ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ. ಮಂಗಳೂರು ಉತ್ತರ ಕ್ಷೇತ್ರದ ಕಾರ್ಯಕರ್ತರು, ಮುಖಂಡರಲ್ಲಿ ಏನೇ ವೈಮನಸ್ಸು ಇದ್ದರೂ ಅದನ್ನು ಮರೆತು ಎಲ್ಲರೂ ಒಂದಾಗಿ ಗೆಲುವಿಗೆ ಶ್ರಮಿಸಬೇಕೆಂದು ಮನವಿ ಮಡಿದರು.
ವೇದಿಕೆಯಲ್ಲಿ ಮಿಥುನ್ ರೈ, ಮಾಜಿ ಮೇಯರ್ ಕವಿತಾ ಸನಿಲ್, ಸುಧೀರ್ ಕುಮಾರ್ ಮುರೊಳಿ, ಗಿರೀಶ್ ಆಳ್ವ, ಶಾಹುಲ್ ಹಮೀದ್, ನೀರೇಶ್ ಪಾಲ್, ಉಮೇಶ್ ದಂಡೆಕೇರಿ, ಕೆ. ಅಭಯಚಂದ್ರ ಜೈನ್, ಯು. ಪಿ ಇಬ್ರಾಹಿಂ, ಶಶಿಕಲಾ ಪದ್ಮನಾಭ, ಜೇಸನ್ ಸುರತ್ಕಲ್, ಸುರೇಂದ್ರ ಕಂಬಳಿ, ಮುಫಿದಾ, ಚಂದ್ರಹಾಸ್ ಪೂಜಾರಿ, ಶ್ರೀನಿವಾಸ್ ಸಾಲಿಯಾನ್, ಆನಂದ ಅಮೀನ್, ನೀರಜ್ ಪಾಲ್, ಮಂಗಳೂರು ಉತ್ತರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಮೊದಲಾದವರು ಉಪಸ್ಥಿತರಿದ್ದರು.

