

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾ.ಪಂ.ಅಧ್ಯಕ್ಷೆಯೊಬ್ಬರು
ಬರೋಬ್ಬರಿ 24 ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪಾಸ್ ಮಾಡಿದ ಅಪರೂಪದ ಘಟನೆ ಪುತ್ತೂರಿನ ಪಾಣಾಜೆಯಲ್ಲಿ ನಡೆದಿದೆ. ಯೆಸ್. ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಭಟ್ ಎಂಬುವವರು 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು.

ಭಾರತಿ ಅವರು 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದರು. ಆದರೆ ತಂದೆಯ ಅಗಲಿಕೆಯಿದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ. ಅನಂತರ ವೆಂಕಟ್ರಮಣ ಭಟ್ ಅವರನ್ನು ವಿವಾಹವಾಗಿ ಪಾಣಾಜೆಯಲ್ಲಿ ನೆಲೆಸಿದ ಅವರು 2 ವರ್ಷಗಳಿಂದ ಪಾಣಾಜೆ ಗ್ರಾ.ಪಂ. ಅಧ್ಯಕ್ಷೆಯಾಗಿದ್ದಾರೆ. 2021-22ನೇ ಸಾಲಿನ 10ನೇ ತರಗತಿಯ ಪರೀಕ್ಷೆ ಬರೆದು ಶೇ. 54 ಅಂಕ ಗಳಿಸಿದ್ದರು. ಇದೀಗ ದ್ವಿತೀಯ ಪಿಯುಸಿಯನ್ನು ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಮಾಡಿರುವ ಅವರು ಪದವಿ ಓದುವ ಗುರಿ ಹೊಂದಿದ್ದಾರೆ.
