

ಉಡುಪಿ ಜಿಲ್ಲೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಆಗಮಿಸಲಿದ್ದಾರೆ. ಸಂಜೆ 4ಕ್ಕೆ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮೀನುಗಾರರ ತಳ ಮಟ್ಟದ ಸಮಸ್ಯೆಯನ್ನು ಅರಿತುಕೊಂಡು ಮುಂದಿನ ದಿನಗಳಲ್ಲಿ ಸೂಕ್ತ ಯೋಜನೆಗಳನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಅವರು ಆಗಮಿಸುತ್ತಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಉಚ್ಚಿಲದಲ್ಲಿ ಮಹಾಲಕ್ಷ್ಮೀ ದೇಗುಲದ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದು, ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಮೀನುಗಾರ ಜೊತೆ ಸಭೆ ಮುಕ್ತಾಯವಾದ ಬಳಿಕ ಮೂಳೂರು ಭಾಗದಲ್ಲಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಕಾಪುವಿನ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆ ನಂತರ ಮಂಗಳೂರಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ ಅವರು ಸಂಜೆ ಮಂಗಳೂರು ನಗರದ ಅಡ್ಯಾರ್ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಂಗಳೂರು ರಾಹುಲ್ ಗಾಂಧಿ ಲೈವ್ ಲಿಂಕ್

