

ಮಂಗಳೂರು: ಪಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಮಂಗಳೂರಿಗೆ ಆಗಮಿಸಿದ್ದಾರೆ. ಏರ್ಪೋರ್ಟ್ನಲ್ಲಿ ಪ್ರಧಾನಿ ಮೋದಿಯವರನ್ನು ಬಿಜೆಪಿಯ ವಿವಿಧ ಮಂಡಲಗಳ 25 ಪ್ರಮುಖರು ಸ್ವಾಗತಿಸಿದ್ದಾರೆ. ಜಿಲ್ಲೆಯ ಮೂಡಬಿದ್ರೆ ಕ್ಷೇತ್ರದ ವ್ಯಾಪ್ತಿಯ ಮುಲ್ಕಿಯಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
- Karnataka Election : ತುಳು ಭಾಷೆಯಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ: ತುಳು ಭಾಷೆಯಲ್ಲಿ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ. , ಮುಲ್ಕಿ ವೆಂಕಟರಮಣ ಸ್ವಾಮೀಜಿಗೆ ನಮಸ್ಕರಿಸಿದರು.
- 03 May 2023 11:28 AM (IST)Karnataka Election live: ದಕ್ಷಿಣ ಕನ್ನಡ-ಉಡುಪಿಯ 13 ಅಭ್ಯಾರ್ಥಿಗಳ :ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಮುಲ್ಕಿಯಲ್ಲಿ ಬಿಜೆಪಿ ಸಾರ್ವಜನಿಕ ಸಮಾವೇಶ ಆಯೋಜಿಸಿದೆ. ಸಮಾವೇಶದಲ್ಲಿ ದಕ್ಷಿಣ ಕನ್ನಡ-ಉಡುಪಿಯ 13 ಅಭ್ಯಾರ್ಥಿಗಳು ಭಾಗಿಯಾಗಲಿದ್ದಾರೆ. ಅಭ್ಯರ್ಥಿಗಳ ಪರ ಪ್ರಧಾನಿ ನರೇಂದ್ರ ಮೋದಿ ಮತಯಾಚಿಲಿದ್ದಾರೆ. ಸಮಾವೇಶದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿಜೆಪಿ ಅಭ್ಯರ್ಥಿಗಳಾದ ಸುನೀಲ್ಕುಮಾರ್, ವೇದವ್ಯಾಸ ಕಾಮತ್ ಭರತ್ ಶೆಟ್ಟಿ, ಸತೀಶ್ ಕುಂಪಲ, ಉಮಾನಾಥ್ ಕೋಟ್ಯಾನ್ ರಾಜೇಶ್ ನಾಯ್ಕ್, ಹರೀಶ್ ಪೂಂಜಾ ಸೇರಿ ಹಲವರು ಉಪಸ್ಥಿತರಿದ್ದಾರೆ.

