

ಹೊನ್ನಾವರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್ಗೆ ಹದ್ದು ಡಿಕ್ಕಿಯಾದ ಘಟನೆ ಇನ್ನೂ ಹಸಿಯಾಗಿರುವಾಗಲೇ ಅವರು ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ರಾಮತೀರ್ಥ ಬಳಿಯ ಹೆಲಿಪ್ಯಾಡ್ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ನಲ್ಲಿ ತೆರಳಿದ್ದ ಶಿವಕುಮಾರ್ ಅವರು ರಾಮತೀರ್ಥದ ಹೆಲಿಪ್ಯಾಡ್ಗೆ ಬಂದಿಳಿದರು. ಈ ವೇಳೆ, ಹೆಲಿಪ್ಯಾಡ್ನ ಬಳಿಯ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹೆಲಿಕಾಪ್ಟರ್ಗೆ ಸಿಗ್ನಲ್ ಕೊಡುವ ಸ್ಮೋಕ್ ಕ್ಯಾಂಡಲ್ನಿಂದ ಬೆಂಕಿ ಆವರಿಸಿದೆ ಎಂದು ಹೇಳಲಾಗುತ್ತಿದೆ. ಹುಲ್ಲಿಗೆ ಹೊತ್ತಿಕೊಂಡ ಬೆಂಕಿಯನ್ನು ಕೂಡಲೇ ಸಿಬ್ಬಂದಿ ಆರಿಸಿದ್ದು, ಸಂಭಾವ್ಯ ದುರಂತ ತಪ್ಪಿದೆ.
ಮಾಹಿತಿ ಅಪ್ಡೇಟ್ ಆಗುತ್ತಿದೆ)

