Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ ಯಶಸ್ವಿಯಾಗುವುದಿಲ್ಲ : ರಮಾನಾಥ ರೈ

editor tv by editor tv
May 4, 2023
in ಚುನಾವಣೆ, ಸುದ್ದಿ
0
ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರ ಯಶಸ್ವಿಯಾಗುವುದಿಲ್ಲ : ರಮಾನಾಥ ರೈ
1.9k
VIEWS
Share on FacebookShare on TwitterShare on Whatsapp

ಬಂಟ್ವಾಳ : ವಾಮಮಾರ್ಗದಲ್ಲಿ ಗೆಲ್ಲುವ ಬಿಜೆಪಿ ತಂತ್ರಕ್ಕೆ ಈ ಬಾರಿ ಯಶಸ್ಸು ಸಿಗಲಾರದು ಎಂದು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಪುಂಜಾಲಕಟ್ಟೆ ಮತ್ತು ಪಿಲಾತಬೆಟ್ಟುವಿನಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನುದ್ದೇಶಿಸಿ ಮಾತನಾಡಿದರು.
ಕಳೆದ ಐದು ವರ್ಷಗಳಲ್ಲಿ ಬಿಜೆಪಿಯ ಅಭಿವೃದ್ಧಿ ಶೂನ್ಯವಾಗಿದೆ. ಜನರ ಮುಂದೆ ಮಾತನಾಡುವುದಕ್ಕೆ ಅವರ ಬಳಿ ವಿಷಯಗಳಿಲ್ಲ. ಹೀಗಾಗಿ ಈ ಬಾರಿ ಕೂಡ ಅವರು ಸುಳ್ಳು, ವದಂತಿಗಳ ಮೂಲಕವೇ ಚುನಾವಣೆ ಗೆಲ್ಲುವ ತಂತ್ರ ಹೂಡಿದ್ದಾರೆ. ಆದರೆ, ಜನರು ಬಿಜೆಪಿಯ ಇಂತಹ ಕುತಂತ್ರಗಳನ್ನು ಮೆಟ್ಟಿನಿಂತು ಕಾಂಗ್ರೆಸ್ ಅನ್ನು ಭಾರೀ ಬಹುಮತದಿಂದ ಗೆಲ್ಲಿಸಲಿದ್ದಾರೆ ಎಂದು ರೈ ಭರವಸೆ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಗಳ ನೇತೃತ್ವ ನಾನು ವಹಿಸಿದ್ದೇನೆ. ಅನೇಕ ದೇವಸ್ಥಾನಗಳಿಗೆ ಧ್ವಜಸ್ಥಂಭ ನೀಡಿ ಸೇವೆ ಸಲ್ಲಿಸಿದ್ದೇನೆ. ಆದರೂ ನನ್ನ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ರೈ ತಿಳಿಸಿದರು.
ರಮಾನಾಥ ರೈಗಳ ಅವಧಿಯಲ್ಲಿ ಬಡವರು, ಅಶಕ್ತರಿಗೆ ಸಾಕಷ್ಟು ಸೌಲಭ್ಯಗಳು ಸುಲಭವಾಗಿ ತಲುಪಿವೆ. ಸುಮಾರು 20,000ಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರಗಳು ಸಿಕ್ಕಿವೆ. ಅಕ್ರಮ ಸಕ್ರಮ ಭೂಮಿ ಹಂಚಿಕೆಯು ಮಾಯಿಲಪ್ಪ ಸಾಲ್ಯಾನರ ಅಧ್ಯಕ್ಷತೆಯಲ್ಲಿ ನಿಷ್ಪಕ್ಷಪಾತವಾಗಿ, ಭ್ರಷ್ಟಾಚಾರ ರಹಿತವಾಗಿ ಹಂಚಲ್ಪಟ್ಟಿತ್ತು. ಆದರೆ, ಈಗ ಭೂಮಿ ಹಂಚಿಕೆಯ ವಿಷಯದಲ್ಲಿ ಯಾವ ರೀತಿಯ ಭ್ರಷ್ಟಾಚಾರ ನಡೆದಿದೆ ಎಂಬುದು ಬಂಟ್ವಾಳದ ಜನತೆಗೆ ತಿಳಿದಿದೆ ಎಂದು ಖ್ಯಾತ ನ್ಯಾಯವಾದಿ, ಕೆಪಿಸಿಸಿ ಮುಖಂಡ ಅಶ್ವನಿ ಕುಮಾರ್ ರೈ ಹೇಳಿದರು.

ಸಜ್ಜನಿಕೆಯ ರಾಜಕಾರಣಕ್ಕೆ ರಮಾನಾಥ ರೈಗಳು ಇಡೀ ರಾಜ್ಯಕ್ಕೆ ಹೆಸರಾದವರು. ಅವರ ಮನೆಗೆ ಯಾರೇ ಬಂದರೂ ವಿನಯ, ವಿದೇಯತೆಯಿಂದ ಕೆಲಸ ಮಾಡಿಕೊಡುತ್ತಾರೆ. ಅಧಿಕಾರ ಇಲ್ಲದಿದ್ದರೂ, ಅವರ ಮನೆಯಲ್ಲಿ ದಿನನಿತ್ಯ ನೂರಾರು ಮಂದಿ ಆಗಮಿಸಿ, ತಮಗೆ ಬೇಕಾದ ಕೆಲಸಗಳನ್ನು ಮಾಡಿಸಿಕೊಂಡು ಹೋಗುತ್ತಿರುತ್ತಾರೆ. ಇಂತಹ ಜನನಾಯಕನನ್ನು ಮತ್ತೊಮ್ಮೆ ಗೆಲ್ಲಿಸುವ ಮೂಲಕ, ಅವರಿಂದ ಕ್ಷೇತ್ರ ಹಾಗೂ ರಾಜ್ಯದ ಜನತೆಗೆ ಸೇವೆಯನ್ನು ಪಡೆಯುವ ಸೌಭಾಗ್ಯವನ್ನು ಮತದಾರ ಒದಗಿಸಿಕೊಡಬೇಕು ಎಂದು ಅವರು ವಿನಂತಿಸಿದರು.
ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಕವಿತಾ ಸನಿಲ್, ಕೆಪಿಸಿಸಿ ಮುಖಂಡ ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್. ರೊಡ್ರಿಗಸ್, ಪ್ರಮುಖರಾದ ಪದ್ಮಶೇಖರ್ ಜೈನ್, ಜನಾರ್ಧನ್ ಚೆಂಡ್ತಿಮಾರ್, ಅಬ್ಬಾಸ್ ಅಲಿ, ಮೋಹನ್ ಸಾಲ್ಯಾನ್, ಬಾಲಾಜಿ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಚುನಾವಣಾ ಕಚೇರಿಗೆ ಭೇಟಿ : ಕೇರಳ ವಿಧಾನಸಭಾ ವಿಪಕ್ಷ ನಾಯಕ ರಮೇಶ್ ಚೆನ್ನಿತಲ, ಕಾಸರಗೋಡು ಸಂಸದ ರಾಜ್ ಮೋಹನ್ ಉನ್ನಿತಾನ್, ಕಾಸರಗೋಡು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹರ್ಷದ್ ವರ್ಕಾಡಿ ಬುಧವಾರ ರಮಾನಾಥ ರೈ ಅವರ ಬಿ.ಸಿ.ರೋಡ್ ನ ಚುನಾವಣಾ ಪ್ರಚಾರ ಕಚೇರಿಗೆ ಭೇಟಿ ನೀಡಿದರು. ರೈ ಅವರು ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆದ್ದು ಬರಲಿ ಎಂದು ಈ ವೇಳೆ ರಮೇಶ್ ಚೆನ್ನಿತಲ ಹಾಗೂ ಇತರ ಮುಖಂಡರು ಹಾರೈಸಿದರು. ರೈಯವರ ಚುನಾವಣಾ ಪ್ರಚಾರದ ಕಾರ್ಯವೈಖರಿಯ ಬಗ್ಗೆ ಸಂಕ್ಷಿಪ್ತವಾಗಿ ಮಾತುಕತೆ ನಡೆಸಿದರು.

Previous Post

ಅಮಿತ್ ಶಾ ತಮ್ಮ ಮಗನನ್ನು ಬಜರಂಗದಳದ ರಾಷ್ಟ್ರಾಧ್ಯಕ್ಷನನ್ನಾಗಿ ಮಾಡಲಿ – ಕಾಂಗ್ರೆಸ್ ಕಿಡಿ

Next Post

60ಕ್ಕೂ ಹೆಚ್ಚು ಪ್ರಕರಣ- ಯುಪಿಯಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಎನ್‍ಕೌಂಟರ್

Next Post
60ಕ್ಕೂ ಹೆಚ್ಚು ಪ್ರಕರಣ- ಯುಪಿಯಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಎನ್‍ಕೌಂಟರ್

60ಕ್ಕೂ ಹೆಚ್ಚು ಪ್ರಕರಣ- ಯುಪಿಯಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಎನ್‍ಕೌಂಟರ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.