Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

ಸಿಎಂ ಆಯ್ಕೆ ಮಧ್ಯೆ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ

editor tv by editor tv
May 16, 2023
in ಚುನಾವಣೆ
0
ಸಿಎಂ ಆಯ್ಕೆ ಮಧ್ಯೆ ನೂತನ ಸಚಿವರ ಶಾರ್ಟ್ ಲಿಸ್ಟ್ ಸಿದ್ಧ: ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಮುಖ್ಯಮಂತ್ರಿ ಆಯ್ಕೆ ಕಗ್ಗಂಟಿನ ನಡುವೆ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನೆಗಳಿಗೆ ಪರೇಡ್‌ ನಡೆಸಿ ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆಸಿದ್ದಾರೆ. ನೂತನ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಹೈಕಮಾಂಡ್ ಕೆಲ ಸೂತ್ರಗಳನ್ನು ಸಿದ್ಧಪಡಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸುರ್ಜೆವಾಲಾ, ಕೆ.ಸಿ. ವೇಣುಗೋಪಾಲ್‌ ಹಾಗೂ ಚುನಾವಣಾ ಕಾರ್ಯತಂತ್ರ ಉಸ್ತುವಾರಿ ಸುನಿಲ್‌ ಕನುಗೋಲು ಸೇರಿ ಸಚಿವರ ಶಾರ್ಟ್ ಲಿಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಿಂದಿನ ‘ಅದಕ್ಷ ಸಚಿವ’ರಿಗೆ ಸ್ಥಾನವಿಲ್ಲ, ಯುವ ಶಾಸಕರಿಗೆ ಹೆಚ್ಚಿನ ಅವಕಾಶ, ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಪುಟ ರಚನೆ, ಪ್ರಣಾಳಿಕೆ ಸಮರ್ಥವಾಗಿ ಜಾರಿ ಮಾಡುವವರಿಗೆ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ಹಾಗಾದ್ರೆ ಶಾರ್ಟ್​ ಲಿಸ್ಟ್​ನಲ್ಲಿ ಯಾರೆಲ್ಲ ಇದ್ದಾರೆ? ಇಲ್ಲಿದೆ ಸಂಭಾವ್ಯ ಸಚಿವರ ಪಟ್ಟಿ.

ಸಂಭಾವ್ಯ ಸಚಿವರ ಪಟ್ಟಿ

  • ಬೆಳಗಾವಿ – ಲಕ್ಷ್ಮಣ್ ಸವಧಿ, ಲಕ್ಷ್ಮೀ ಹೇಬ್ಬಾಳ್ಕರ್, ಸತೀಶ್ ಜಾರಕಿಹೊಳಿ
  • ಬಾಗಲಕೋಟೆ – ಆರ್.ಬಿ.ತಿಮ್ಮಾಪುರ
  • ಬಿಜಾಪುರ – ಎಂ.ಬಿ. ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡ ಪಾಟೀಲ್
  • ಕಲಬುರಗಿ – ಪ್ರಿಯಾಂಕ್‌ ಖರ್ಗೆ, ಅಜಯ್‌ ಸಿಂಗ್, ಶರಣ ಪ್ರಕಾಶ್ ಪಾಟೀಲ್
  • ರಾಯಚೂರು – ಬಸನಗೌಡ ತುರುವಿಹಾಳ/ಹಂಪನಗೌಡ ಬಾದರ್ಲಿ
  • ಯಾದಗಿರಿ – ಶರಣಪ್ಪ ದರ್ಶನಾಪುರ್
  • ಬೀದರ್ – ರಹೀಮ್‌ ಖಾನ್, ಈಶ್ವರ್‌ ಖಂಡ್ರೆ
  • ಕೊಪ್ಪಳ – ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ
  • ಗದಗ – ಹೆಚ್‌.ಕೆ. ಪಾಟೀಲ್
  • ಧಾರವಾಡ – ವಿನಯ್‌ ಕುಲಕರ್ಣಿ, ಪ್ರಸಾದ್‌ ಅಬ್ಬಯ್ಯ/ಸಂತೋಷ್ ಲಾಡ್
  • ಉತ್ತರ ಕನ್ನಡ – ಭೀಮಣ್ಣ ನಾಯಕ್
  • ಹಾವೇರಿ – ರುದ್ರಪ್ಪ ಲಮಾಣಿ
  • ಬಳ್ಳಾರಿ – ತುಕಾರಾಮ್‌, ನಾಗೇಂದ್ರ
  • ಚಿತ್ರದುರ್ಗ – ರಘುಮೂರ್ತಿ
  • ದಾವಣಗೆರೆ – ಶಾಮನೂರು ಶಿವಶಂಕರಪ್ಪ/ ಎಸ್​ಎಸ್​ ಮಲ್ಲಿಕಾರ್ಜುನ
  • ಶಿವಮೊಗ್ಗ – ಮಧು ಬಂಗಾರಪ್ಪ, ಬಿ.ಕೆ.ಸಂಗಮೇಶ್
  • ಚಿಕ್ಕಮಗಳೂರು – ಟಿ.ಡಿ. ರಾಜೇಗೌಡ
  • ತುಮಕೂರು – ಡಾ. ಜಿ. ಪರಮೇಶ್ವರ್, ಎಸ್ ಆರ್. ಶ್ರೀನಿವಾಸ್, ಕೆಎನ್ ರಾಜಣ್ಣ
  • ಚಿಕ್ಕಬಳ್ಳಾಪುರ – ಸುಬ್ಬಾರೆಡ್ಡಿ
  • ಕೋಲಾರ- ರೂಪ ಶಶೀಧರ್​/ನಾರಾಯಣ ಸ್ವಾಮೀ
  • ಬೆಂಗಳೂರು- ಕೆಜೆ ಜಾರ್ಜ್​/ ರಾಮಲಿಂಗಾ ರೆಡ್ಡಿ, ಹ್ಯಾರಿಸ್​, ಎಂ. ಕೃಷ್ಣಪ್ಪ, ದಿನೇಶ್​ ಗುಂಡೂರಾವ್, ಜಮೀರ್ ಅಹಮ್ಮದ್ ಖಾನ್
  • ಮಂಡ್ಯ- ಎನ್​​ ಚೆಲುವರಾಯ ಸ್ವಾಮಿ
  • ದೆಹಲಿ ವಿಶೇಷ ಪ್ರತಿನಿಥಿ: ಪಿ ಎಂ. ನರೇಂದ್ರ ಸ್ವಾಮಿ
  • ಮಂಗಳೂರು- ಯುಟಿ ಖಾದರ್
  • ಮೈಸೂರು-ಎಚ್​ಸಿ ಮಾಹದೇವಪ್ಪ/ ತನ್ವೀರ್​ ಸೇಠ್​ಚಾಮರಾಜನಗರ- ಪುಟ್ಟರಂಗಶೆಟ್ಟಿ
  • ಕೊಡಗು- ಎಎಸ್​ ಪೊನ್ನಣ್ಣ
  • ಬೆಂಗಳೂರು ಗ್ರಾಮಾಂತರ. ಕೆಚ್​​ ಮುನಿಯಪ್ಪ

ವಿಧಾನ ಪರಿಷತ್‌ನಿಂದ ಸಂಪುಟಕ್ಕೆ ಸಂಭಾವ್ಯ ಅಭ್ಯರ್ಥಿಗಳು

  • ಬಿ.ಕೆ. ಹರಿಪ್ರಸಾದ್
  • ಸಲೀಂ ಅಹಮದ್
  • ನಜೀರ್‌ ಅಹಮದ್
  • ಮಂಜುನಾಥ್‌ ಬಂಡಾರಿ
  • ದಿನೇಶ್‌ ಗೂಳಿಗೌಡ
  • ಎಸ್. ರವಿ

ಪ್ರದೇಶವಾರು, ಜಾತಿವಾರು, ಯುವಕರು, ಪಕ್ಷನಿಷ್ಠೆ, ಕಾರ್ಯದಕ್ಷತೆ, ವಯೋಮಾನವನ್ನು ಮಾನದಂಡವಾಗಿ ಪರಿಗಣಿಸಲಾಗಿದೆ. ಸಚಿವರಾಗಿ ನೇಮಕವಾಗುವವರು ಈ ಹಿಂದೆ ಬಿಜೆಪಿ ಸರ್ಕಾರದ ಸಚಿವರ ಬಳಿ ಕೆಲಸ ಮಾಡಿದ ಸಿಬ್ಬಂದಿ, ಆಪ್ತ ಕಾರ್ಯದರ್ಶಿಗಳನ್ನು ತಮ್ಮ ಕಚೇರಿಗೆ ತೆಗೆದುಕೊಳ್ಳುವಾಗ ಎಚ್ಚರಿಕೆ ವಹಿಸಬೇಕು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್‌ ಬೆಂಬಲಿಗ ಶಾಸಕರು ಎನ್ನುವುದನ್ನು ಬಿಟ್ಟು ಪಕ್ಷಕ್ಕೆ ಅನುಕೂಲವಾಗುವ, ಪಕ್ಷ ಸಂಘಟನೆಗೆ ಒತ್ತು ನೀಡುವವರಿಗೆ ಆದ್ಯತೆ ನೀಡಲಾಗುವುದು ಮತ್ತು ಹಿಂಬಾಲಕರಿಗೆ ಮಣೆ ಹಾಕುವುದು ಬೇಡ ಎಂದು ಹೈಕಮಾಂಡ್‌ ತೀರ್ಮಾನಿಸಿದೆ.

ಭಾರಿ ಬಹುಮತದೊಂದಿಗೆ ಅಧಿಕಾರಕ್ಕೇರುತ್ತಿರುವ ಕಾಂಗ್ರೆಸ್‌ನಿಂದ ಯಾರೇ ಮುಖ್ಯಮಂತ್ರಿಯಾದರೂ ಸಚಿವ ಸಂಪುಟ ರಚನೆ ಎಂಬುದು ಕಬ್ಬಿಣದ ಕಡಲೆಯಾಗಿ ಕಾಡುವುದರಲ್ಲಿ ಯಾವುದೇ ಸಂಶಯವಿಲ್ಲ. ಇದಕ್ಕೆ ಮುಖ್ಯ ಕಾರಣ ಸಚಿವ ಸಂಪುಟ ಸೇರಲು ಅರ್ಹತೆ ಹಾಗೂ ಲಾಬಿ ನಡೆಸಲು ಸಜ್ಜಾಗಿರುವ ಕಾಂಗ್ರೆಸ್‌ನ ಘಟಾನುಘಟಿ ನಾಯಕರು. ಕಾಂಗ್ರೆಸ್‌ ಹೈಕಮಾಂಡ್‌ನಲ್ಲಿ ಪ್ರಭಾವಶಾಲಿಯಾಗಿದ್ದ ಹಲವರು ಸೇರಿದಂತೆ ಹಲವು ಪ್ರಮುಖ ನಾಯಕರು ರಾಜ್ಯ ರಾಜಕಾರಣಕ್ಕೆ ಹಿಂತಿರುಗಿದ್ದಾರೆ. ಅಲ್ಲದೆ, ಹಿರಿತನ ಹಾಗೂ ಅನುಭವ ಇರುವ ಘಟಾನುಘಟಿಗಳು ಸಹ ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಹೀಗಾಗಿ, ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಹಾಗೂ ಸೇರ್ಪಡೆಯಾದ ನಂತರ ಅವರನ್ನು ನಿಭಾಯಿಸುವುದು ಹೊಸ ಮುಖ್ಯಮಂತ್ರಿಗೆ ದೊಡ್ಡ ಸವಾಲಾಗಲಿದೆ.

ಒಟ್ಟಿನಲ್ಲಿ ಸಿಎಂ ಆಯ್ಕೆ ಬೆನ್ನಲ್ಲೇ ಸಚಿವ ಸಂಪುಟ ರಚನೆ ದೊಡ್ಡ ಸವಾಲ್​ ಆಗಿದ್ದು, ಯಾವ ರೀತಿಯಾಗಿ ಸಚಿವ ಸ್ಥಾನ ಹಂಚಿಕೆ ಮಾಡುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

Previous Post

ಬೆಳಗಾವಿಯಲ್ಲಿ ಸಾಹುಕಾರ್​ಗೆ ಮುಖಭಂಗ: ರಮೇಶ್ ಜಾರಕಿಹೊಳಿ ವಿರುದ್ದ ಸಿಡಿದೆದ್ದ ಮೂಲ ಬಿಜೆಪಿಗರು

Next Post

ದಕ್ಷಿಣ ಕನ್ನಡದಲ್ಲಿ ಹಿಂದುತ್ವ V/S ಬಿಜೆಪಿ ಬಿಕ್ಕಟ್ಟು

Next Post
ದಕ್ಷಿಣ ಕನ್ನಡದಲ್ಲಿ ಹಿಂದುತ್ವ V/S ಬಿಜೆಪಿ ಬಿಕ್ಕಟ್ಟು

ದಕ್ಷಿಣ ಕನ್ನಡದಲ್ಲಿ ಹಿಂದುತ್ವ V/S ಬಿಜೆಪಿ ಬಿಕ್ಕಟ್ಟು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.