
ಲಕ್ನೋ: ವಿಶ್ವವಿದ್ಯಾಲಯದಲ್ಲಿ (University) ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ (Student) ಕಾಲೇಜ್ ಕ್ಯಾಂಪಸ್‌ನಲ್ಲಿಯೇ (Campus) ತನ್ನ ಸ್ನೇಹಿತೆಯನ್ನು (Friend) ಗುಂಡಿಕ್ಕಿ ಕೊಂದಿದ್ದು ಮಾತ್ರವಲ್ಲದೇ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ನೋಯ್ಡಾದಲ್ಲಿ (Noida) ನಡೆದಿದೆ.
ನೋಯ್ಡಾದ ಶಿವ ನಾಡರ್ ವಿಶ್ವವಿದ್ಯಾನಿಲಯದ (Shiv Nadar University) ಕ್ಯಾಂಪಸ್‌ನಲ್ಲಿ 3ನೇ ವರ್ಷದ ಸಮಾಜಶಾಸ್ತ್ರ ವಿದ್ಯಾರ್ಥಿ ಅನುಜ್ ತನ್ನ ಸ್ನೇಹಿತೆಯೊಂದಿಗೆ ಕ್ಯಾಂಪಸ್‌ನಲ್ಲಿರುವ ಡೈನಿಂಗ್ ಹಾಲ್‌ನ ಹೊರಗಡೆ ಜಗಳವಾಡಿದ್ದಾನೆ. ಬಳಿಕ ಆಕೆಯನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅನುಜ್ ತನ್ನ ಸ್ನೇಹಿತೆಯೊಂದಿಗೆ ಮೊದಲಿಗೆ ಜಗಳವಾಡಿದ್ದಾನೆ. ಬಳಿಕ ತನ್ನ ಬಂದೂಕನ್ನು ಹೊರಗೆ ತೆಗೆದು ಆಕೆಯನ್ನು ಶೂಟ್ ಮಾಡಿದ್ದಾನೆ. ವಿದ್ಯಾರ್ಥಿನಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಕೆ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ

ಈ ನಡುವೆ ಅನುಜ್ ತನ್ನ ಹಾಸ್ಟೆಲ್‌ನ ಕೋಣೆಗೆ ಹೋಗಿ ತನಗೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅನುಜ್ ಹಾಗೂ ವಿದ್ಯಾರ್ಥಿನಿ ಉತ್ತಮ ಸ್ನೇಹಿತರಾಗಿದ್ದು, ಕಳೆದ ಕೆಲವು ದಿನಗಳಿಂದ ಜಗಳವಾಡುತ್ತಿದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

