
ಮಾಜಿ ಸಚಿವ ಬಿಜೆಪಿ ರೆಬಲ್ ಶಾಸಕ ಡಾ. ಕೆ. ಸುಧಾಕರ್ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.
- ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ತಾಯಿ ನಿಧನ.
- ಡಾ. ಕೆ. ಸುಧಾಕರ್ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್.
- ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲು ಪ್ರದೀಪ್ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.

ಚಿಕ್ಕಬಳ್ಳಾಪುರ : ಮಾಜಿ ಸಚಿವ ಬಿಜೆಪಿ ರೆಬಲ್ ಶಾಸಕ ಡಾ. ಕೆ. ಸುಧಾಕರ್ ವಿರುದ್ಧ ಗೆದ್ದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ರತ್ನಮ್ಮ (72) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅಂತಿಮ ದರ್ಶನ ಪಡೆಯಲು ಪ್ರದೀಪ್ ಈಶ್ವರ್ ಬೆಂಗಳೂರಿನಿಂದ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದಾರೆ.

ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಪ್ರದೀಪ್ಅ ರವರ ಸಾಕು ತಾಯಿ ರತ್ನಮ್ಮ ರವರು ಚಿಕ್ಕಬಳ್ಳಾಪುರದ ಪೇರೇಸಂದ್ರ ಗ್ರಾಮದಲ್ಲಿ ಕೊನೆಯುಸಿರೆಳಿದ್ದು, ಪ್ರದೀಪ್ ಈಶ್ವರ್ಗೆ ಆಘಾತ ಉಂಟುಮಾಡಿದೆ. ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಬಂದಿದ್ದ ಪ್ರದೀಪ್ ಅವರು ಸುದ್ದಿ ತಿಳಿಯುತ್ತಿದ್ದಂತೆ ಪೇರೇಸಂದ್ರ ಗ್ರಾಮಕ್ಕೆ ತೆರಳಿದ್ದು, ಅಂತ್ಯ ಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಮೇ 10 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರನ್ನು ಸೋಲಿಸಿ ಪ್ರದೀಪ್ ಈಶ್ವರ್ ಶಾಸಕರಾಗಿ ವಿಧಾನಸಭೆಗೆ ಆಯ್ಕೆ ಆಗಿದ್ದಾರೆ. ಇಂದು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ತಾಯಿಯ ಅಗಲಿಕೆ ಹಿನ್ನೆಲೆ ಪೇರೇಸಂದ್ರಕ್ಕೆ ತೆರಳಿದ್ದಾರೆ.

ಇನ್ನು ಪ್ರದೀಪ್ ವಿಧಾಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ನಂತರ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿರುವ ಮನೆ ಮನೆಗೆ ತೆರಳಿ ಜನರ ಸಮಸ್ಯೆಗಳನ್ನು ಆಲಿಸಿದ್ದರು. ಹಾಗೆಯೆ ಮೊನ್ನೆಯಷ್ಟೇ ಬೆಳಗ್ಗೆ ಮೈಲಪ್ಪನಹಳ್ಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದರು. ಇಂದು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.