
ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜೂನ್ 12 ರಂದು ನರ್ಮದಾ ನದಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಜಬಲ್ಪುರದಲ್ಲಿ ರೋಡ್ ಶೋ ಮತ್ತು ರ್ಯಾಲಿಯೊಂದಿಗೆ ಮಧ್ಯಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ
ಕರ್ನಾಟಕದಲ್ಲಿ (Karnataka) ಸರ್ಕಾರ ರಚಿಸಿದ ನಂತರ, ಈ ವರ್ಷ ನಡೆಯಲಿರುವ ಮಧ್ಯಪ್ರದೇಶದಲ್ಲಿ(Madhya Pradesh) ಮತ್ತೊಂದು ನಿರ್ಣಾಯಕ ವಿಧಾನಸಭಾ ಚುನಾವಣೆಯನ್ನು (Congress) ನೋಡುತ್ತಿದೆ. ಈ ಹಿನ್ನಲೆಯಲ್ಲಿ ಪಕ್ಷ ಸೋಮವಾರ ಐದು ಭರವಸೆಗಳನ್ನು ಘೋಷಿಸಿದೆ. ಒಂದು ಗ್ಯಾಸ್ ಸಿಲಿಂಡರ್ ಬೆಲೆ ₹ 500 ಮತ್ತು ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ತಿಂಗಳಿಗೆ ₹ 1500 ಸೇರಿದಂತೆ ಐದು ಭರವಸೆಗಳನ್ನು ಕಾಂಗ್ರೆಸ್ ನೀಡಿದೆ,

ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಜನತೆಗೆ ಕಾಂಗ್ರೆಸ್ ನೀಡಿದ ಐದು ಭರವಸೆಗಳು:
1. ಗ್ಯಾಸ್ ಸಿಲಿಂಡರ್ ₹500
2. ಪ್ರತಿ ಮಹಿಳೆಗೆ ತಿಂಗಳಿಗೆ ₹ 1500
3. 100 ಯೂನಿಟ್ ಉಚಿತ ವಿದ್ಯುತ್, 200 ಯೂನಿಟ್ ಗೆ ಅರ್ಧ ಹಣ
4. ಕೃಷಿ ಸಾಲ ಮನ್ನಾ
5. ಹಳೆಯ ಪಿಂಚಣಿ ಯೋಜನೆ ಜಾರಿ
ಹಿರಿಯ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಜೂನ್ 12 ರಂದು ನರ್ಮದಾ ನದಿಗೆ ಪ್ರಾರ್ಥನೆ ಸಲ್ಲಿಸಿದ ನಂತರ ಜಬಲ್ಪುರದಲ್ಲಿ ರೋಡ್ ಶೋ ಮತ್ತು ರ್ಯಾಲಿಯೊಂದಿಗೆ ಮಧ್ಯಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯಿಂದ ಹೊರಗುಳಿದಿರುವ ಮಹಾಕೋಶಲ್ ಅನ್ನು ಪ್ರಿಯಾಂಕಾ ಆಯ್ಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ., ಭಾರತ್ ಜೋಡೋ ಯಾತ್ರೆ ರಾಜ್ಯದ ಮಾಲ್ವಾ ಮತ್ತು ಮಧ್ಯ ಭಾರತದ ಪ್ರದೇಶಗಳಲ್ಲಿ ಸಂಚರಿಸಿದ್ದು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆಯನ್ನು ಪಡೆದಿತ್ತು.

2023 ರ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ರಾಜ್ಯಸಭಾ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ನಾವು ಮಧ್ಯಪ್ರದೇಶದಲ್ಲಿ ಕಮಲ್ ನಾಥ್ ಅವರ ನೇತೃತ್ವದಲ್ಲಿ ಚುನಾವಣೆಯನ್ನು ಎದುರಿಸುತ್ತೇವೆ. ಹಾಗಾಗಿ, ಅವರು ಸಿಎಂ ಮುಖವಾಗುತ್ತಾರೆ ಎಂದು ಸಿಂಗ್ ಬುದ್ನಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. 2018 ರ ಚುನಾವಣೆಯಲ್ಲಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಮಧ್ಯ ಪ್ರದೇಶದಲ್ಲಿ ವರ್ಷಾಂತ್ಯದಲ್ಲಿ ಅಸೆಂಬ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ.ಆದರೆ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಅವರ 20 ಕ್ಕೂ ಹೆಚ್ಚು ನಿಷ್ಠಾವಂತ ಶಾಸಕರ ಬಂಡಾಯದ ನಂತರ ಅದರ ಸರ್ಕಾರವು ಮಾರ್ಚ್ 2020 ರಲ್ಲಿ ಪತನವಾಯಿತು. ಇದು ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ದಾರಿ ಮಾಡಿಕೊಟ್ಟಿತು.