
ನವದೆಹಲಿ: ದೆಹಲಿಯಲ್ಲಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಂಪುಟ ರಚನೆ ಕಸರತ್ತು ನಡೆಯುತ್ತಿದ್ದು, ಮುಖ್ಯಮಂತ್ರಿ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಕಾಂಂಗ್ರೆಸ್ ವಾರ್ ರೂಮ್ನಲ್ಲಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಜೊತೆ ಸಭೆ ನಡೆಸುತ್ತಿದ್ದಾರೆ. ಅಂತಿಮವಾಗಿ ಎಐಸಿಸಿ ಅಧ್ಯಕ್ಷ ಖರ್ಗೆ ಭೇಟಿ ಬಳಿಕ ಪಟ್ಟಿ ಫೈನಲ್ ಆಗಮಿದೆ. ಇದಕ್ಕೂ ಮುನ್ನ ಸಂಭವನೀಯ ಸಚಿವರ ಪಟ್ಟಿ ಲಭ್ಯವಾಗಿದೆ. ಹಾಗಿದ್ದರೆ ಯಾರಿಗೆಲ್ಲ ಮಂತ್ರಿಗಿರಿ ಸಿಗುವ ಸಾಧ್ಯತೆ ಇದೆ? ಇಲ್ಲಿದೆ ಪಟ್ಟಿ:

ಹೆಚ್.ಕೆ.ಪಾಟೀಲ್, ಮಂಕಾಳ ವೈದ್ಯ, ಶಿವಾನಂದ ಪಾಟೀಲ್, ಭೈರತಿ ಸುರೇಶ್, ಕೃಷ್ಣ ಭೈರೇಗೌಡ, ಡಾ.ಶರಣಪ್ರಕಾಶ್ ಪಾಟೀಲ್, ಶರಣಬಸಪ್ಪ ದರ್ಶನಾಪುರ, ರಹೀಂ ಖಾನ್, ಈಶ್ವರ್ ಖಂಡ್ರೆ, ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮಣ ಸವದಿ, ಕೆ.ವೆಂಕಟೇಶ್, ಮಧು ಬಂಗಾರಪ್ಪ, ಸಂತೋಷ್ ಲಾಡ್, ವಿನಯ್ ಕುಲಕರ್ಣಿ, ವಿಧಾನಪರಿಷತ್ ಸದಸ್ಯ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಇನ್ನು, ವಿಧಾನಸಭೆ ಉಪಸಭಾಪತಿ ಸ್ಥಾನ ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ್ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.
ಪ್ರಮಾಣವಚನ ಮೇ 28ರಂದು ನಡೆಯಲಿದ್ದು,

ಮಲ್ಲಿಕಾರ್ಜುನ ಖರ್ಗೆ ಮೇಲೆ ನಿಂತಿದೆ ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ
ಸಂಭವನೀಯ ಸಚಿವರ ಪಟ್ಟಿಯ ಭವಿಷ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಿಂತಿದೆ. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಸಂಭವನೀಯ ಸಚಿವರ ಪಟ್ಟಿ ಸಿದ್ಧಪಡಿಸಲಾಗಿದ್ದು, ನಂತರ ಈ ಪಟ್ಟಿ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಸೇರಲಿದೆ. ಬಳಿಕ ಮೂರ್ನಾಲ್ಕು ಹೆಸರುಗಳು ಬದಲಾಗುವ ಸಾಧ್ಯತೆಯೂ ಇದೆ.
ಶರಣ ಪ್ರಕಾಶ್ ಪಾಟೀಲ್, ದಿನೇಶ್ ಗುಂಡೂರಾವ್, ಆರ್ ವಿ ದೇಶಪಾಂಡೆ, ಬಿಕೆ ಹರಿಪ್ರಸಾದ್ ಸಚಿವ ಸಂಪುಟಕ್ಕೆ ಸೇರ್ಪಡೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ನಿರ್ಧಾರ ಕೈಗೊಳ್ಳಲುವ ಸಾಧ್ಯತೆ ಇದೆ. ಇಂದು ಸಂಜೆ 5 ಗಂಟೆಗೆ ಸಿದ್ದರಾಮಯ್ಯ ಡಿಕೆಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ.

ದೇಶಪಾಂಡೆ, ಹರಿಪ್ರಸಾದ್ಗಿಲ್ಲ ಸಚಿವ ಸ್ಥಾನ
ಹಿರಿಯ ಶಾಸಕರಾದ ಆರ್‌ವಿ ದೇಶಪಾಂಡೆ ಹಾಗೂ ಬಿಕೆ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಬಿ.ಕೆ.ಹರಿಪ್ರಸಾದ್ ಬದಲು ಎಂಎಲ್‌ಸಿ ಬೋಸರಾಜು ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ. ಹಿರಿಯರ ಸಂಪುಟ ಸೇರ್ಪಡೆ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಬಂದಿಲ್ಲ.
ಆರ್.ವಿ.ದೇಶಪಾಂಡೆ ಸೇರಿ ಹಲವು ಹಿರಿಯರ ಸೇರ್ಪಡೆಗೆ ಡಿಕೆ ಶಿವಕುಮಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಮಧು ಬಂಗಾರಪ್ಪ, ಬಿ.ಕೆ.ಹರಿಪ್ರಸಾದ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಆದರೆ ಒಂದೇ ಸಮುದಾಯದ ಮಧು, ಹರಿಪ್ರಸಾದ್ ಸೇರ್ಪಡೆಗೆ ಸಿದ್ದರಾಮಯ್ಯ ಅವರು ಅಸಮ್ಮತಿ ಸೂಚಿಸಿದ್ದಾರೆ. ಸದ್ಯ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ಒಲಿದುಬಂದಿದ್ದು, ಹರಿಪ್ರಸಾದ್ ಅವರಿಗೆ ಮಂತ್ರಿ ಸ್ಥಾನ ಕೈತಪ್ಪಿದೆ.