
ಬೆಂಗಳೂರು ಗ್ರಾಮಾಂತರ: ಮೋಜು ಮಸ್ತಿ ಮಾಡಲು ಬಂದಿದ್ದ ನಾಲ್ವರು ಯುವಕರು ನೀರುಪಾಲಾದಂತಹ ಘಟನೆ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರದ ಕೆರೆಯಲ್ಲಿ ನಡೆದಿದೆ. ಆರ್.ಟಿ.ನಗರದ ಶೇಖ್, ತೋಹಿದ್, ಶಾಹಿದ್, ಫೈಜಲ್ ಮೃತರು. ನಂದಿಬೆಟ್ಟಕ್ಕೆ ತೆರಳಿದ್ದ ಯುವಕರು ಕೆರೆಯಲ್ಲಿ ಈಜಲು ಇಳಿದಿದ್ದರು. ನೀರಿನಲ್ಲಿ ಮುಳುಗುತ್ತಿದ್ದವರನ್ನ ರಕ್ಷಿಸಲು ಹೋಗಿ ನಾಲ್ವರೂ ಮೃತಪಟ್ಟಿದ್ದಾರೆ. ಕೆರೆ ಬಳಿ ಬಟ್ಟೆ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಬ್ಬರ ಮೃತದೇಹವನ್ನು ಅಗ್ನಿಶಾಮಕ ದಳ ಹೊರತೆಗೆದಿದ್ದು, ಮತ್ತಿಬ್ಬರ ಮೃತದೇಹಕ್ಕಾಗಿ ಹುಡುಕಾಟ ಮುಂದುವರೆಸಿದ್ದಾರೆ. ವಿಶ್ವನಾಥಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

