
ಮಂಗಳೂರು: ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಜೂನ್ 6 ಹಾಗೂ 7ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.ನೈತಿಕ ಪೊಲೀಸ್‌ಗಿರಿ ಘಟನೆ ಬೆನ್ನಲ್ಲೇ ಗೃಹ ಸಚಿವರು ಮಂಗಳೂರು ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಭೆಯಲ್ಲಿ ಮಂಗಳೂರು ಕಮಿಷನರೇಟ್ ಹಾಗೂ ಪಶ್ಚಿಮ ವಲಯ ಅಧಿಕಾರಿಗಳ ಜೊತೆ ಚರ್ಚಿಸುವ ಸಾದ್ಯತೆ.

ಜೂ.6ರಂದು ಬೆಳಿಗ್ಗೆ 8.35ಕ್ಕೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, 8.45ಕ್ಕೆ ನಗರದ ಸಕ್ರ್ಯೂಟ್ ಹೌಸ್‍ಗೆ ತೆರಳುವರು. ಬೆಳಿಗ್ಗೆ 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿ ಭೇಟಿ ಮತ್ತು ವಲಯ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. 12.30ಕ್ಕೆ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ಮತ್ತು ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 1.30ಕ್ಕೆ ನಗರದ ಸಕ್ರ್ಯೂಟ್ ಹೌಸ್‍ಗೆ ತೆರಳುವರು ಅಲ್ಲಿಂದ ಮಧ್ಯಾಹ್ನ 2 ಗಂಟೆಗೆ ಉಡುಪಿಗೆ ಪ್ರಯಾಣಿಸುವರು.
ಜೂ.7ರಂದು ಸಂಜೆ 4.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಹೊರಟು 5.25ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೈತಿಕ ಪೊಲೀಸ್ ಗಿರಿ ಘಟನೆ; ಮಹತ್ವ ಪಡೆದ ಭೇಟಿ
ನೈತಿಕ ಪೊಲೀಸ್‌ಗಿರಿ ಘಟನೆ ಬೆನ್ನಲ್ಲೇ ಗೃಹ ಸಚಿವರು ಮಂಗಳೂರು ಭೇಟಿ ನೀಡುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಇಂದು ಸಭೆಯಲ್ಲಿ ಮಂಗಳೂರು ಕಮಿಷನರೇಟ್ ಹಾಗೂ ಪಶ್ಚಿಮ ವಲಯ ಅಧಿಕಾರಿಗಳ ಜೊತೆ ಚರ್ಚಿಸುವ ಸಾದ್ಯತೆ. ನಗರದ ಕಾನೂನು ಸುವ್ಯವಸ್ಥೆ ಬಗ್ಗೆ ಕಮಿಷನರೇಟ್ ಅಧಿಕಾರಿಗಳ ಜೊತೆ ಸಭೆ. ಪಶ್ಚಿಮ ವಲಯದ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಜೊತೆಗೂ ಸಭೆ. ಈ ಸಭೆಯಲ್ಲಿ ದ.ಕ ಜಿಲ್ಲೆಯಲ್ಲಿ ನಡೆದ ಕೋಮು ಹತ್ಯೆಗಳ ಮಾಹಿತಿ ಪಡೆಯುವ ಸಾಧ್ಯತೆ. ಅಲ್ಲದೆ ಬಿಜೆಪಿ ಅವಧಿಯಲ್ಲಿ ನಡೆದ ಕೋಮು ಹತ್ಯೆಗಳ ಮಾಹಿತಿ ಪಡೆಯುವ ಸಾಧ್ಯತೆ. ಈಗಾಗಲೇ ಫಾಜಿಲ್, ಜಲೀಲ್, ಮಸೂದ್ ಹತ್ಯೆ ಮರು ತನಿಖೆಗೆ ಒತ್ತಾಯ ಕೇಳಿಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕುಟುಂಬಸ್ಥರಿಂದ ಸಲ್ಲಿಕೆಯಾಗಿರೋ ಮನವಿ. ಮನವಿ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳ ಜೊತೆ ಗೃಹ ಸಚಿವರ ಸಭೆ. ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕುವ ನಿಟ್ಟಿನಲ್ಲೂ ಸೂಚನೆ ಕೊಡೋ ಸಾಧ್ಯತೆ.