
ಮಣಿಪುರದಲ್ಲಿ ಚರ್ಚ್ ಹಾಗೂ ಕ್ರಿಶ್ಚಿಯನ್ನರ ಮೇಲೆ ನಡೆಯುತ್ತಿರುವ ದಾಳಿಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ, ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಂ ಮಂಗಳೂರು ಇದರ ವತಿಯಿಂದ ಮಂಗಳೂರು ನಗರದ ಕ್ಲಾಕ್‌ಟವರ್ ಬಳಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಕಡೆಗಳಿಂದ ಆಗಮಿಸಿದ ಸಾವಿರಾರು ಮಂದಿ ಕ್ರೈಸ್ತ ಸಮುದಾಯದವರು, ಧರ್ಮಗುರುಗಳು, ಧರ್ಮಭಗಿನಿಯರು, ಇತರ ಸಮುದಾಯ ಮತ್ತು ಸಂಘಟನೆಗಳ ಸಮಾನ ಮನಸ್ಕರು ಪಾಲ್ಗೊಂಡರಲ್ಲದೆ ಬಿಜೆಪಿ ಸರಕಾರದ ವೈಫಲ್ಯದ ವಿರುದ್ಧ ಘೋಷಣೆ ಕೂಗಿದರು.


ಮುಖ್ಯ ಭಾಷಣಗೈದ ಕಿನ್ನಿಗೋಳಿ ಚರ್ಚ್‌ನ ಧರ್ಮಗುರು ಫಾ. ಪಾವೋಸ್ತಿನ್ ಲೋಬೋ ಮಾತನಾಡಿದರು. ಭಗಿನಿ ಸಿಸಿಲಿಯಾ ಮೆಂಡೋನ್ಸಾ, ಮದರ್ ತೆರೇಸಾ ವಿಚಾರ ವೇದಿಕೆಯ ರೊಯ್ ಕ್ಯಾಸ್ಟಲಿನೋ ಮಾತನಾಡಿದರು.
ಈ ಸಂದರ್ಭ ಮಂಗಳೂರು ಧರ್ಮಪ್ರಾಂತದ ಶ್ರೇಷ್ಟ ಧರ್ಮಗುರು ಫಾ. ಮ್ಯಾಕ್ಸಿಂ ನೊರೊನ್ಹಾ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್, ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಮಾಜಿ ಮೇಯರ್ ಕೆ.ಅಶ್ರಫ್, ಮಾಜಿ ಉಪಮೇಯರ್ ಮುಹ್ಮಮದ್ ಕುಂಜತ್ತಬೈಲ್, ಸಾಮಾಜಿಕ ಕಾರ್ಯಕರ್ತೆ ಮಂಜುಳಾ ನಾಯಕ್, ಐಸಿವೈಎಂನ ಅನಿಲ್ ಸಿಕ್ವೇರಾ, ಸಂಘಟಕರಾದ ಆಲ್ಪ್ರೆಡ್ ಮನೋಹರ್, ಸ್ಟ್ಯಾನಿ ಲೋಬೋ, ಜಾನ್ ಡಿಸಿಲ್ವಾ ಮತ್ತಿತರರು ಉಪಸ್ಥಿತರಿದ್ದರು.
