Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ನೂತನ ಸಂಸತ್ ಭವನದ ಮೊದಲ ಫೋಟೊದಲ್ಲಿದ್ದು ಚುನಾಯಿತ ಸದಸ್ಯರಲ್ಲ, ಕೇಸರಿ ಬಟ್ಟೆ ತೊಟ್ಟವರು: ಶರದ್ ಪವಾರ್

editor tv by editor tv
June 7, 2023
in ರಾಷ್ಟ್ರೀಯ
0
ನೂತನ ಸಂಸತ್ ಭವನದ ಮೊದಲ ಫೋಟೊದಲ್ಲಿದ್ದು ಚುನಾಯಿತ ಸದಸ್ಯರಲ್ಲ, ಕೇಸರಿ ಬಟ್ಟೆ ತೊಟ್ಟವರು: ಶರದ್ ಪವಾರ್
1.9k
VIEWS
Share on FacebookShare on TwitterShare on Whatsapp

ಔರಂಗಾಬಾದ್: ಸಂಸತ್ತಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಸಂವಾದದ ಪ್ರಾಮುಖ್ಯತೆಯನ್ನು ಒತ್ತಿಹೇಳಿರುವ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ಅಧ್ಯಕ್ಷ ಶರದ್ ಪವಾರ್ (Sharad Pawar) ಹೊಸ ಸಂಸತ್ ಭವನದ(New Parliament Building) ಬಗ್ಗೆ ರಾಜಕೀಯ ಪಕ್ಷಗಳೊಂದಿಗೆ ಮಾತುಕತೆಯ ಮೂಲಕ ನಿರ್ಧಾರ ತೆಗೆದುಕೊಳ್ಳಬಹುದಿತ್ತು ಎಂದು ಹೇಳಿದ್ದಾರೆ.ಮಂಗಳವಾರ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿರುವ ಮಹಾತ್ಮಾ ಗಾಂಧಿ ಮಿಷನ್ ವಿಶ್ವವಿದ್ಯಾಲಯದಲ್ಲಿ ನಡೆದ ಸೌಹಾರ್ದ ಬೈಠಕ್​​ನಲ್ಲಿ ಮಾತನಾಡುತ್ತಿದ್ದರವರು. ಸಂಸತ್ತಿನ ಚಟುವಟಿಕೆಗಳ ಬಗ್ಗೆ ಸಂವಾದ ಏರ್ಪಡಿಸುತ್ತಿಲ್ಲ. ಈ ಹಿಂದೆಯೂ ರಾಜಕೀಯ ಪಕ್ಷಗಳಲ್ಲಿ ಭಿನ್ನಾಭಿಪ್ರಾಯಗಳಿತ್ತು. ಇದನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡಲಾಗುತ್ತಿತ್ತು.

ಹೊಸ ಸಂಸತ್ ಭವನದ ಅಗತ್ಯವೇನಿತ್ತು? ಎಂದು ನನಗೆ ಅರ್ಥವಾಗಲಿಲ್ಲ.ರಾಜಕೀಯ ಪಕ್ಷಗಳೊಂದಿಗೆ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಆದರೆ ಹೊಸ ಕಟ್ಟಡದ ಬಗ್ಗೆ ಪತ್ರಿಕೆಗಳ ಮೂಲಕ ತಿಳಿದುಕೊಂಡೆ ಎಂದು ಎನ್​​ಸಿಪಿ ನಾಯಕ ಹೇಳಿದ್ದಾರೆ.

ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಸುಮಾರು 20 ಪ್ರತಿಪಕ್ಷಗಳು ದೂರ ಉಳಿದಿವೆ. ಪ್ರಧಾನಿಯವರು ಉದ್ಘಾಟನೆಯನ್ನು “ಪಟ್ಟಾಭಿಷೇಕ” ಎಂದು ಪರಿಗಣಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಸರ್ಕಾರದ ಪ್ರಮುಖ ವ್ಯಕ್ತಿಗಳು ನಿಯಮಿತವಾಗಿ ಸಂಸತ್ತಿನ ಅಧಿವೇಶನಗಳಿಗೆ ಹಾಜರಾಗುವುದಿಲ್ಲ. ಸರ್ಕಾರದ ಮುಖ್ಯಸ್ಥರು ಒಂದು ದಿನ ಸಂಸತ್ತಿಗೆ ಬಂದರೆ ಅದು ವಿಶೇಷವಾಗಿರುತ್ತದೆ. ಸಂಸತ್ ಎಲ್ಲಕ್ಕಿಂತ ಹೆಚ್ಚು, ಅದಕ್ಕೆ ಪ್ರಾಮುಖ್ಯತೆ ನೀಡದಿದ್ದರೆ, ಜನರ ಗ್ರಹಿಕೆ  ಮೇಲೆಯೂ ಇದು ಪರಿಣಾಮ ಬೀರುತ್ತದೆ ಎಂದು ಯಾರ ಹೆಸರನ್ನೂ ಉಲ್ಲೇಖಿಸದೆ ಪವಾರ್ ಹೇಳಿದ್ದಾರೆ.

ಸಂಸತ್ ನಲ್ಲಿ ನಾನು “ಸಣ್ಣ” ರಾಜಕೀಯ ಪಕ್ಷದ ನಾಯಕ ಎಂದ ಪವಾರ್ ನಾವು (ವಿರೋಧ ಪಕ್ಷ) ಹೊಸ ಸಂಸತ್ತಿನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲು ಒತ್ತಾಯಿಸಿದ್ದೇವೆ, ಅದನ್ನು ಬಿಜೆಪಿ ವಿರೋಧಿಸುವ ಅಗತ್ಯವಿಲ್ಲ. ಸಂಸತ್ತಿನ ಮೊದಲ ಅಧಿವೇಶನದ ನಂತರ ಕ್ಲಿಕ್ ಮಾಡಿದ ಫೋಟೋದಲ್ಲಿ ಡಾ ಬಿ ಆರ್ ಅಂಬೇಡ್ಕರ್ ಮತ್ತು ಪಂಡಿತ್ ಜವಾಹರಲಾಲ್ ನೆಹರು ಸೇರಿದಂತೆ ದೇಶದ ಅನೇಕ ನಾಯಕರು ಇದ್ದರು ಎಂದು ಪವಾರ್ ಹೇಳಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬದಿಗಿಟ್ಟಿದೆ ಎಂದು ಆರೋಪಿಸಿ ಪ್ರತಿಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದವು. ಮುರ್ಮು ಅವರು ದೇಶದ ಸಾಂವಿಧಾನಿಕ ಮುಖ್ಯಸ್ಥರಾಗಿರುವುದರಿಂದ ಸಂಸತ್ ಭವನವನ್ನು ಅವರು ಉದ್ಘಾಟಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿದ್ದವು.

ಏತನ್ಮಧ್ಯೆ, ಚುನಾಯಿತ ನಾಯಕರಿಗೆ ಮೊದಲು ಹೊಸ ಕಟ್ಟಡಕ್ಕೆ ಪ್ರವೇಶಿಸುವ ಅವಕಾಶ ಸಿಗಲಿಲ್ಲ ಎಂದು ಆರೋಪಿಸಿದ ಪವಾರ್, ಹೊಸ ಸಂಸತ್ ಭವನದ ಮೊದಲ ಫೋಟೋ ಪ್ರಕಟವಾಗಿದ್ದು ಚುನಾಯಿತ ಸದಸ್ಯರೊಂದಿಗೆ ಅಲ್ಲ, ಕೇಸರಿ ಬಟ್ಟೆ ತೊಟ್ಟಿರುವವರ ಜೊತೆ ಎಂದು ಹೇಳಿದ್ದಾರೆ.

Previous Post

ರಾಜ್ಯಕ್ಕೆ ಮುಂಗಾರು ಆಗಮನ ವಿಳಂಬ: ದಕ್ಷಿಣ ಕನ್ನಡದಲ್ಲಿ ನೀರಿನ ಅಭಾವ, ಕೆಲವೊಂದು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ

Next Post

Sandesara Brothers: ಭಾರತದಲ್ಲಿ ವಂಚಕರು, ನೈಜೀರಿಯಾದಲ್ಲಿ ಹೀರೋಗಳು… 14,000 ಕೋಟಿ ಪಂಗನಾಮಿ ಹಾಕಿ ಪರಾರಿಯಾದ ಸಂದೇಸರ ಸಹೋದರರ ಕರ್ಮಕಾಂಡ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.