
ಗೃಹಜ್ಯೋತಿ ಯೋಜನೆ ಲಾಭ ಪಡೆಯಲು ಉಚಿತ ವಿದ್ಯುತ್ಅರ್ಜಿ ಹಾಕಬೇಕು. ಸೇವಾ ಸಿಂಧು ಆ್ಯಪ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೇ ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ಮಾಡುತ್ತೇವೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್ಗಿಂತ (200 Unit Electricity Free) ಕಡಿಮೆ ಬಳಕೆದಾರರು 2.16 ಕೋಟಿ ಜನರಿದ್ದಾರೆ. 2 ಲಕ್ಷ ಗ್ರಾಹಕರು ಮಾತ್ರ 200 ಯೂನಿಟ್ಗಿಂತ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಗೃಹಜ್ಯೋತಿ (Gruha jyothi) ಯೋಜನೆ ಲಾಭ ಪಡೆಯಲು ಅರ್ಜಿ ಹಾಕಬೇಕು. ಸೇವಾ ಸಿಂಧು ಆ್ಯಪ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಹಾಗೇ ಒಂದು ಪ್ರತ್ಯೇಕ ಆ್ಯಪ್ ಬಿಡುಗಡೆ ಮಾಡುತ್ತೇವೆ. ಸ್ವಂತ ಮನೆ ಇರಲಿ, ಬಾಡಿಗೆ ಮನೆ ಇರಲಿ ಕರಾರುಪತ್ರ ಬೇಕು ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ (KJ George) ಹೇಳಿದ್ದಾರೆ.

ಬೆಂಗಳೂರಿನ ಬೆಸ್ಕಾಂ ಮುಖ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸ ಮನೆ ಕಟ್ಟಿದವರಿಗೆ, ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಾಡಿಗೆ ಇರುವವರಿಗೆ ಸದ್ಯಕ್ಕೆ ಯೋಜನೆ ಸಿಗಲ್ಲ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಇನ್ನು 2 ದಿನದಲ್ಲಿ ಸ್ಪಷ್ಟನೆ ಕೊಡುತ್ತೇವೆ. ಬೇರೆ ರಾಜ್ಯದಿಂದ ಬಂದು ಇಲ್ಲಿ ವಾಸವಾದವರಿಗೂ ಈ ಸೌಲಭ್ಯ ನೀಡಲಾಗುತ್ತದೆ. ಆದರೆ ಆಧಾರ್ ವಿಳಾಸ ಇಲ್ಲಿ ಇರುವಂತೆ ಬದಲಾಯಿಸಿಕೊಳ್ಳಬೇಕು. ಇಲ್ಲವಾದಲ್ಲಿ ಬಾಡಿಗೆ ಕರಾರುಪತ್ರ ಕಡ್ಡಾಯವಾಗಿ ಇರಬೇಕು ಎಂದು ಹೇಳಿದರು.

ಜುಲೈ ತಿಂಗಳಿನ ಬಿಲ್ ಆಗಸ್ಟ್ನಲ್ಲಿ ಪಾವತಿ ಮಾಡುವುದು ಬೇಡ. 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಮೇಲೆ ಶೇ 10 ರಷ್ಟು ವಿದ್ಯುತ್ ಉಚಿತವಾಗಿ ನೀಡುತ್ತೇವೆ. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. 200 ಯೂನಿಟ್ಗಿಂತ ಹೆಚ್ಚುವರಿ ವಿದ್ಯುತ್ ಬಳಸಿದರೇ ಯೂನಿಟ್ ಸ್ಲಾಬ್ ಅನ್ವಯ ನಿಗದಿತ ಶುಲ್ಕ ಪಾವತಿ ಮಾಡಬೇಕು ಎಂದು ತಿಳಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ. ಚುನಾವಣೆ ಮುಗಿದ ನಂತರ ಇಂದಿನ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಜಾರಿಗೆ ಬಂದಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ನಮ್ಮ ಸರ್ಕಾರದ ಬಡವರು, ಮಧ್ಯಮ ವರ್ಗದವರನ್ನು ರಕ್ಷಿಸುತ್ತಿದೆ. ಬಡವರು ಬಿಲ್ ಕಟ್ಟುವುದೇ ಬೇಡ ಎಂದು ಗೃಹಜ್ಯೋತಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.