
ಪಣಜಿ: ದಕ್ಷಿಣ ಗೋವಾ ಜಿಲ್ಲಾಡಳಿವು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ 60 ದಿನಗಳ ಕಾಲ ಜಿಲ್ಲೆಯೊಳಗೆ ಪ್ರವೇಶಿಸದಂತೆ ನಿಷೇಧ ಹೇರಿದೆ. ಮುಂದಿನ 60 ದಿನಗಳ ಕಾಲ ಜಿಲ್ಲೆಯ ವ್ಯಾಪ್ತಿಯೊಗಳಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಜಿಲ್ಲಾಡಳಿತವು ಆದೇಶ ಹೊರಡಿಸಿದೆ. ಪ್ರಖರ ಹಿಂದುತ್ವವಾದಿಯಾಗಿರುವ ಮುತಾಲಿಕ್, ಜಿಲ್ಲೆಯಲ್ಲಿ ಕೋಮು ಭಾವನೆಗೆ ಧಕ್ಕೆ ತರುವಂತಹ, ಧರ್ಮಗಳ ಮಧ್ಯೆ ದ್ವೇಷ ಹರಡುವ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡುತ್ತಾರೆ. ಇದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ಇದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ. ಈ ಹಿಂದೆಯೂ ಮುತಾಲಿಕ್‌ಗೆ ದಕ್ಷಿಣ ಗೋವಾ ಜಿಲ್ಲಾಧಿಕಾರಿಗಳು ಜಿಲ್ಲೆ ಪ್ರವೇಶಿಸದಂತೆ ನಿಷೇಧ ಹೇರಿದ್ದರು.

