
ಚಿತ್ರದುರ್ಗ: ಇಲ್ಲಿನ ವಿಜಯಪುರ ಗೊಲ್ಲರಹಟ್ಟಿ ಗ್ರಾಮದ ಬಳಿ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂರು ತಿಂಗಳ ಮಗು ಸೇರಿ ಬೆಂಗಳೂರಿನ ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.ಮೂರು ತಿಂಗಳ ಮಗು ಫಾತಿಮಾ, ತಾಯಿ ತಬ್ಸೂಮ್ ಹಾಗೂ ಸಂಬಂಧಿ ಜಾಕೀರ್ ಅಹ್ಮದ್ ಮೃತ ದುರ್ದೈವಿಗಳು. ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ.

ನಯಾಜ್, ಇಮ್ರಾನ್ ಖಾನ್, ತಬ್ರೀಜ್ ಅಹಮ್ಮದ್, ಸಬಾ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
