
ಗಳೂರು : ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರ ಪರಿಚಯಿಸಿದ ಮತಾಂತರ ವಿರೋಧಿ ಕಾನೂನನ್ನ ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ಬಿಜೆಪಿ ಸರ್ಕಾರದ ಆಡಳಿತದ ವೇಳೆ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಗೆ ಇದೀಗ ಕಾಂಗ್ರೆಸ್ ಸರ್ಕಾರ ಕೊಕ್ ನೀಡಿದೆ. ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅವಕಾಶ ನೀಡಿಲ್ಲ ಎಂದಿದ್ದ ಕಾಂಗ್ರೆಸ್ ಇದೀಗ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಲು ಅನುಮೋದನೆ ಪಡೆಗುಕೊಂಡಿದೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಘೋಷಿಸಿದೆ. ಬಿಜೆಪಿ ಸೇರಿಸಿದ್ದ ಪಠ್ಯಗಳನ್ನು ತೆಗೆದು ಹಾಕಲು ನಿರ್ಧರಿಸಿರುವ ಸಿದ್ದರಾಮಯ್ಯ ಸರ್ಕಾರ, ಇದೀಗ ಬಿಜೆಪಿ ಜಾರಿಗೆ ತಂದಿದ್ದ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಲು ಸಂಪುಟ ಸಭೆಯ ಅನುಮೋದನೆ ಪಡೆಯಲಾಗಿದೆ. ಬಿಜೆಪಿಯ ಮಹತ್ವಾಕಾಂಕ್ಷಿಯ ಮತಾಂತರ ನಿಷೇಧ ಕಾಯ್ದೆಗೆ ಇದೀಗ ಕಾಂಗ್ರೆಸ್ ಸರ್ಕಾರ ಬ್ರೇಕ್ ಹಾಕಿದೆ.

ಈ ಬಾರಿಯ ಚನಾವಣೆಯಲ್ಲಿ ಕಾಂಗ್ರೆಸ್, ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್, ಹಿಜಾಬ್ ನಿಷೇಧ ಆದೇಶಗಳನ್ನು ವಾಪಸ್ ಪಡೆಯುವುದಾಗಿ ಹೇಳಿತ್ತು.ಇಂದು ನಡದ ಸಂಪುಟ ಸಭೆಯಲ್ಲಿ ಹಲವು ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಮತಾಂತರ ನಿಷೇಧ ಕಾಯ್ದೆ ಪ್ರಮುಖವಾಗಿದೆ. ಬಿಜೆಪಿ ಆಡಳಿತದಲ್ಲಿ ಜಾರಿಗೆ ತಂದಿರುವ ಜನವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯುತ್ತೇವೆ ಎಂದು ಸಚಿವ ಹೆಚ್‌ಕೆ ಪಾಟೀಲ್ ಹೇಳಿದ್ದಾರೆ
ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದಂತೆ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿತ್ತು. ಬಿಜೆಪಿ ಆಡಳಿತದಲ್ಲಿ ತಂದಿದ್ದ ಈ ಮತಾಂತರ ನಿಷೇಧ ಕಾಯ್ದೆಗೆ ಕೊಕ್ ನೀಡಿ, ಕೆಲ ಬದಲಾವಣೆ ಮಾಡಲಾಗುವುದು ಎಂದು ಹೆಚ್‌ಕೆ ಪಾಟೀಲ್ ಹೇಳಿದ್ದಾರೆ.
ಕೆಲವು ಬದಲಾವಣೆ ಮೂಲಕ ಮತಾಂತರ ನಿಷೇಧ ಕಾಯ್ದೆ ವಿಧೇಯಕ ತರಲು ಸಂಪುಟ ಸಭೆ ತಿರ್ಮಾನ ಮಾಡಿದೆ ಎಂದು ಹೆಚ್‌ಕೆ ಪಾಟೀಲ್ ಹೇಳಿದ್ದಾರೆ. ಕಾಂಗ್ರೆಸ್ ಸಂಪುಟ ಸಭೆ ತೀರ್ಮಾಗಳು ಹೊರಬರುತ್ತಿದ್ದಂತೆ ಬಿಜೆಪಿ ಆಕ್ರೋಶ ಹೊರಹಾಕಿದೆ.

ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಶಾಲಾ ಪಠ್ಯಪುಸ್ತಕ ಪಾಠಗಳನ್ನ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದೆ.
ಇನ್ನು ಇನ್ನೊಂದು ಮಹತ್ವದ ನಿರ್ಧಾರ ೆನ್ನುವಂತೆ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.

ಬಿಜೆಪಿ ಅವಧಿಯಲ್ಲಿ ಮಾಡಿದ್ದ ಪಠ್ಯ ಪರಿಷ್ಕರಣೆಗೆ ಕೊಕ್ ನೀಡಲಾಗಿದೆ. ಬಿಜೆಪಿ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹೆಡಗೆವಾರ್, ಚಕ್ರವರ್ತಿ ಸೂಲೆಬೆಲೆ, ವೀರ್ ಸಾವರ್ಕರ್ ಪಠ್ಯವನ್ನು ತೆಗೆಯಲಾಗಿದೆ. ಇನ್ನು ಜವಾಹರ್ ಲಾಲ್ ನೆಹರೂ, ಡಾ. ಬಿಆರ್ ಅಂಬೇಡ್ಕರ್, ಸಾವಿತ್ರಿ ಭಾಯಿ ಪುಲೆ ಸೇರಿದಂತೆ ಕೆಲ ಪಠ್ಯಗಳನ್ನು ಸೇರ್ಪಡೆಗೆ ಸಂಪುಟ ಅನುಮೋದನೆ ನೀಡಿದೆ. ಬಿಜೆಪಿ ಅವಧಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.