
ರಾಜ್ಯದ ಎಲ್ಲ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ, ರಾಷ್ಟ್ರಗೀತೆಯಂತೆ ಸಂವಿಧಾನ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.
ಬೆಂಗಳೂರು (ಜೂ.15): ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಈವರೆಗೆ ಪ್ರಾರ್ಥನೆಯ ವೇಳೆ ನಾಡಗೀತೆ ಮತ್ತು ರಾಷ್ಟ್ರಗೀತೆಯನ್ನು ಹಾಡಲು ಅವಕಾಶವಿತ್ತು. ಈಗ ಈ ಎರಡೂ ಗೀತೆಯೊಂದಿಗೆ ಸಂವಿಧಾನ ಪೀಠಿಕೆ ಓದುವುನ್ನೂ ಕಡ್ಡಾಯಗೊಳಿಸಲು ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಲ್ಲ ಇಲಾಖೆಗಳ ಸಚುವರೂ ಭಾಗವಹಿಸಿದ್ದರು. ಈ ವೇಳೆ ಹಿಂದಿನ ಬಿಜೆಪಿ ಸರ್ಕಾರ ತೆಗೆದುಕೊಂಡಿದ್ದ ಬಹುತೇಕ ವಿವಾದಿತ ಕಾಯ್ದೆಗಳನ್ನು ಕಾಂಗ್ರೆಸ್ ಈಗ ರದ್ದುಗೊಳಿಸಲು ಮುಂದಾಗಿದೆ. ಈ ಪೈಕಿ ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಕಾರ್ಯಕ್ಕೂ ಕೈಹಾಕಿದೆ. ಮುಖ್ಯವಾಗಿ ಬಿಜೆಪಿ ಸರ್ಕಾರದಿಂದ ಸೇರ್ಪಡೆ ಮಾಡಲಾಗಿಉದ್ದ ಪಠ್ಯಗಳನ್ನು ತೆಗೆದುಹಾಕಲು ಮುಂದಾಗಿದೆ. ಜೊತೆಗೆ, ಪರಿಷ್ಕರಣೆಗೂ ಮುನ್ನ ಪಠ್ಯಪುಸ್ತಕದಿಂದ ಕೈಬಿಡಲಾಗಿದ್ದ ಪಠ್ಯವನ್ನು ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ.

ಸಂವಿಧಾನ ಪೀಠಿಕೆ ಓದು ಕಡ್ಡಾಯ: ಇನ್ನುಮುಂದೆ ರಾಜ್ಯದ ಎಲ್ಲ ಸರ್ಕಾರಿ, ಸರ್ಕಾರಿ ಅನುದಾನಿತ ಹಾಘೂ ಸರ್ಕಾರದ ಒಪ್ಪಿಗೆ ಪಡೆದು ಸ್ಥಾಪಿಸಲಾದ ಎಲ್ಲ ಖಾಸಗಿ ಶಾಲೆಗಳಲ್ಲಿಯೂ ಸಂವಿಧಾನ ಪೀಠಿಕೆ ಓದನ್ನು ಕಡ್ಡಾಯಗೊಳಿಸಲು ಮುಂದಾಗಿದೆ. ಈವರೆಗೆ ಎಲ್ಲ ಶಾಲಾ-ಕಾಲೇಜುಗಳಲ್ಲಿ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಹಾಗೂ ರಾಷ್ಟ್ರೀಯ ಹಬ್ಬಗಳಲ್ಲಿ ನಾಡಗೀತೆ, ರಾಷ್ಟ್ರಗೀತೆಗಳನ್ನು ಹಾಡಲಾಗುತ್ತಿತ್ತು. ಈಗ ಅದರೊಂದಿಗೆ ಭಾರತೀಯ ಸಂವಿಧಾನದ ಪೀಠಿಕೆ ಓದುವುದನ್ನು ಕೂಡ ಕಡ್ಡಾಯಗೊಳಿಸಲಿ ರಾಜ್ಯ ಸರ್ಕಾದರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
