
ಕಲಬುರಗಿ:ಕಲಬುರಗಿಯ ನೂತನ ಜಿಲ್ಲಾಧಿಕಾರಿಯಾಗಿ ಫೌಝಿಯಾ ತರನ್ನುಮ್ ಅವರನ್ನು ರಾಜ್ಯ ಸರಕಾರ ನಿಯುಕ್ತಿ ಮಾಡಿ ಆದೇಶ ಹೋರಡಿಸಿದೆ.
2015 ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿದ್ದ ಫೌಝಿಯಾ ತರನ್ನುಮ್ ಅವರು ಈ ಹಿಂದೆ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.

ನಂತರ ಚಿಕ್ಕಬಳ್ಳಾಪುರ ಹಾಗೂ ಕೊಪ್ಪಳ ಜಿಲ್ಲಾ ಪಂಚಾಯಿತಿಗಳ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು.ಬಳಿಕ ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರಾಗಿದ್ದರು.
ಕಲಬುರ್ಗಿಯಿಂದ ವರ್ಗಾವಣೆಯಾಗಿರುವ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಡಿ.ಬದೋಲೆ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ನಿಯಂತ್ರಕರ ಹುದ್ದೆಗೆ ವರ್ಗಾಯಿಸಲಾಗಿದೆ.
ಫೌಝಿಯಾ ತರನ್ನುಮ್ ಇದೀಗ ಕಲಬುರಗಿ ಜಿಲ್ಲಾಧಿಕಾರಿಯಾಗಿ ನಿಯುಕ್ತಿಗೊಂಡಿದ್ದಾರೆ.
