
ಕುಟುಂಬದ ಒಡತಿಗೆ ಮಾಸಿಕ 2000 ಗೌರವಧನ ನೀಡುವ ಗೃಹಲಕ್ಷ್ಮೀ ಯೋಜನೆಯ ಆ್ಯಪ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ರಾಜ್ಯ ಸರ್ಕಾರದ ಯೋಜನೆಗಳಿಗೆ ಈ ರೀತಿ ಅಡ್ಡಿಪಡಿಸಿ ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ ಸತೀಶ್ ಜಾರಕಿಹೊಳಿ

ಬೆಳಗಾವಿ(ಜೂ.21): ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿ ವಿಳಂಬವಾಗುತ್ತಿರುವ ನಡುವೆಯೇ ಇದೀಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗೃಹಲಕ್ಷ್ಮೀ ಯೋಜನೆಯ ಆ್ಯಪ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಅನ್ನಭಾಗ್ಯ ಯೋಜನೆ ಜಾರಿಗಾಗಿ ರಾಜ್ಯಕ್ಕೆ ಅಕ್ಕಿ ನೀಡದೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ನಗರದ ಕಾಂಗ್ರೆಸ್ ಭವನದಿಂದ ರಾಣಿ ಚೆನ್ನಮ್ಮ ವೃತ್ತದವರೆಗೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಂಗಳವಾರ ಮಾತನಾಡಿದರು.

ಕುಟುಂಬದ ಒಡತಿಗೆ ಮಾಸಿಕ 2000 ಗೌರವಧನ ನೀಡುವ ಗೃಹಲಕ್ಷ್ಮೀ ಯೋಜನೆಯ ಆ್ಯಪ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ. ರಾಜ್ಯ ಸರ್ಕಾರದ ಯೋಜನೆಗಳಿಗೆ ಈ ರೀತಿ ಅಡ್ಡಿಪಡಿಸಿ ಕೇಂದ್ರ ಸರ್ಕಾರವು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿದೆ. ಈ ಮೂಲಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಈ ತಿಂಗಳು ವಿಳಂಬ?:
ಈ ತಿಂಗಳು ಜನತೆಗೆ 10 ಕೆ.ಜಿ.ಅಕ್ಕಿ ನೀಡಲು ವಿಳಂಬ ಆಗಬಹುದು. ಮುಂದಿನ ತಿಂಗಳಿಂದ 10 ಕೆ.ಜಿ. ಅಕ್ಕಿ ನೀಡಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಸರ್ಕಾರ ಮಾಡುತ್ತಿದೆ. ಕೇಂದ್ರದಲ್ಲಿ ಏಳು ಲಕ್ಷ ಟನ್ ಅಕ್ಕಿ ದಾಸ್ತಾನಿದೆ. ನಾವು 2 ಲಕ್ಷ ಟನ್ ಅಕ್ಕಿಗೆ ಬೇಡಿಕೆ ಇಟ್ಟಿದ್ದೇವೆ. ಆದರೆ ನಿಮಗೆ ಕೊಡಲು ಆಗಲ್ಲ, ಖಾಸಗಿಯವರಿಗೆ ನೀಡುತ್ತೇವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿಸಿದರು.