
M. Ashraf Kammaje upadated on 8.55am
ಮಂಗಳೂರು :ಜೂ 28 (Hayath tv): ಲಾರಿ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತದಲ್ಲಿ, ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳವಾರ ಸಂಜೆ ಅಡ್ಡೂರಿನಲ್ಲಿ ನಡೆದಿದೆ.
ಕಳಸಗುರಿ ನಿವಾಸಿ ಬಾಲಕೃಷ್ಣ ಶೆಟ್ಟಿ ಕೊಡಿಬೆಟ್ಟು ಗಾಯಗೊಂಡವರು.

ಪೊಳಲಿ ಪುಂಚಮೆಯಿಂದ ಅಡ್ಡೂರು ದಾರಿ ಮಧ್ಯೆ ಎದುರಿನಿಂದ ಬರುತ್ತಿದ್ದ ಕೆಂಪು ಕಲ್ಲಿನ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಲಾರಿ ರಸ್ತೆ ಮಧ್ಯೆ ಪಲ್ಡಿಯಾಗಿದೆ. ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು,ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದು, ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಸ್ತೆಗೆ ಸ್ಪೀಡ್ ಬ್ರೇಕರ್ (ಹಂಪ್ಸ್ ) ಹಾಕದೆ ಇರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಇದೇ ರೀತಿ ಅನೇಕ ಅಪಘಾತಗಳು ಇಲ್ಲಿ ನಡೆಯುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಗಮನಹರಿಸಿ ಪರಿಹಾರ ಒದಗಿಸಬೇಕಾಗಿದೆ
