
ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ (Uniform Civil Code) ಕುರಿತು ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ಇದರ ನಡುವೆ ಸಂಸದೀಯ ಸ್ಥಾಯಿ ಸಮಿತಿ ಇಂದು ಸಭೆಯನ್ನು ಆಯೋಜಿಸಿದೆ. ಇದರಲ್ಲಿ ಶಿವಸೇನೆ ಸಂಸದ ಸಂಜಯ್ ರಾವತ್ ಭಾಗಿಯಾಗಲಿದ್ದಾರೆ ಜತೆಗೆ ಇಬ್ಬರು ಸಂಸದರು ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರವು ಏಕರೂಪ ನೀತಿ ಸಂಹಿತೆಯ ಮಸೂದೆಯನ್ನು ಸಂಸತ್ ಮುಂಗಾರು ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ. ಸಂಸದರ ಅಭಿಪ್ರಾಯವನ್ನು ತಿಳಿಯಲು ಸಂಸದೀಯ ಸ್ಥಾಯಿ ಸಮಿತಿ ಸಭೆ ಕರೆಯಲಾಗಿದೆ. ಬಿಜೆಪಿಯ ರಾಜ್ಯಸಭಾ ಸಂಸದ ಸುಶೀಲ್ ಮೋದಿ ಸಭೆಯ ಅಧ್ಯಕ್ಷತೆವಹಿಸಲಿದ್ದಾರೆ.

ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು, ಕಾನೂನು ಮತ್ತು ನ್ಯಾಯದ ಇಲಾಖೆ-ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿಯ ಸಭೆಯು ಜುಲೈ 3 ರಂದು ಸೋಮವಾರ ಮಧ್ಯಾಹ್ನ 3.00 ಗಂಟೆಗೆ ನಡೆಯಲಿದೆ.
