
ರೈತನ ಜಮೀನಿನಲ್ಲಿ ಬೆಳೆದಿದ್ದ 400ಕ್ಕೂ ಅಧಿಕ ಅಡಿಕೆ ಸಸಿಗಳು ದುಷ್ಮರ್ಮಿಗಳು ಕಿತ್ತು ಹಾಕಿರುವ ಘಟನೆ ತುಮಕೂರಿನ ಶಿರಾ ತಾಲೂಕಿನ ಯರಗಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗಿಣ್ಣಪ್ಪನಹಟ್ಟಿ ಗ್ರಾಮದ ರೈತ ಹನುಮಂತಯ್ಯ ಸೇರಿದ ಅಡಿಕೆ ಮರಗಳು. 1100 ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನ ಎರಡು ವರ್ಷಗಳ ಹಿಂದೆ ನೆಟ್ಟಿದ್ದ ರೈತ. ಈ ಪೈಕಿ 400 ಕ್ಕೂ ಹೆಚ್ಚು ಅಡಿಕೆ ಸಸಿಗಳನ್ನ ಕಡಿದು ಹಾಕಿರುವ ದುಷ್ಕರ್ಮಿಗಳು. ಶ್ರಮವಹಿಸಿ ಬೆಳೆದಿದ್ದ ಅಡಿಕೆ ಸಸಿಗಳು ಕತ್ತರಿಸಿರುವುದು ನೋಡಿ ಕಂಗಾಲಾಗಿರುವ ರೈತ ಹನಮಂತಯ್ಯ.

ಸ್ಥಳಕ್ಕೆ ಬುಕ್ಕಾಪಟ್ಟಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ತಂಡ ರಚನೆ ಮಾಡಿ ಹುಡುಕಾಟ ನಡೆಸಿರುವ ಪೊಲೀಸರು. ಬುಕ್ಕಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

