
Karnataka Budget 2023 Live: 1696 ಕೋಟಿ ವೆಚ್ಚದಲ್ಲಿ ರಾಯಚೂರಿನಲ್ಲಿ ಹೈಬ್ರಿಡ್ ಆನ್ಯೂಟಿ ಮಾದರಿ ರಸ್ತೆ ನಿರ್ಮಾಣ
ಬೆಂಗಳೂರು: ಕಲ್ಯಾಣ ಕರ್ನಾಟಕದ ಸರ್ವತೋಮುಖ ಪ್ರಗತಿಗೆ ಅನುದಾನ ನೀಡಲಾಗಿದ್ದು, ರಾಯಚೂರಿನ ಕಲ್ಮಲಾ ಜಂಕ್ಷನ್ನಿಂದ ಸಿಂಧನೂರಿನವರೆಗೆ ಹೈಬ್ರಿಡ್ ಆನ್ಯೂಟಿ ಮಾದರಿಯ ರಸ್ತೆ ನಿರ್ಮಾಣಕ್ಕೆ 1696 ಕೋಟಿ ವೆಚ್ಚದಲ್ಲಿ 78 ಕಿ.ಮೀ ಉದ್ದದ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಜೊತೆಗೆ 4,083 ಕೋಟಿ ವೆಚ್ಚದಲ್ಲಿ ಅಂತರ್ ಜಿಲ್ಲಾ ಸಂಪರ್ಕ ಕಲ್ಪಿಸಲು 2400 ಕಿ.ಮೀ ಜಿಲ್ಲಾ ರಸ್ತೆಗಳ ಅಭಿವೃದ್ಧಿಗಾಗಿ ನಿರ್ಧರಿಸಲಾಗಿದೆ.

Karnataka Budget 2023 Live: 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ
ಬೆಂಗಳೂರು: ಮಕ್ಕಳಲ್ಲಿನ ಕಲಿಕಾ ದೋಷಗಳ ನಿವಾರಣೆಗೆ ಸರ್ಕಾರ ಕ್ರಮ ಕೈಗೊಂಡಿದ್ದು, 80 ಕೋಟಿ ರೂ. ವೆಚ್ಚದಲ್ಲಿ ಕಲಿಕಾ ಕಾರ್ಯಕ್ರಮ ರೂಪಿಸಲು ನಿರ್ಧಾರ ಮಾಡಲಾಗಿದೆ. ಮರುಸಿಂಚನ ಯೋಜನೆಯಡಿ ಪ್ರೌಢಹಂತದ ಪರೀಕ್ಷೆಗೆ ಸಜ್ಜುಗೊಳಿಸಲು ಮಕ್ಕಳಿಗೆ ವಿಶೇಷ ತರಬೇತಿ ಜೊತೆಗೆ ಮಾಧ್ಯಮಿಕ, ಪದವಿ ಪೂರ್ವ ಕಾಲೇಜುಗಳಲ್ಲಿ ಲ್ಯಾಬ್ ಆರಂಭ ಮಾಡಲಾಗುವುದು. ಇನ್ನು 2 ಕೋಟಿ ರೂ. ವೆಚ್ಚದಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು ಎನ್ನಲಾಗಿದೆ. ಮತ್ತು ರಾಜ್ಯದ ಪ್ರತಿ ಕಂದಾಯ ವಿಭಾಗದಲ್ಲಿ 4 ಲ್ಯಾಬ್ಗಳ ಸ್ಥಾಪನೆ ಮಾಡಲಾಗುವುದು.
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ
ಬೆಂಗಳೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ನೀಡುವ ಊಟದಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ವಾರದಲ್ಲಿ 2 ಬಾರಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಣೆ ಮಾಡಲು ನಿರ್ಧಾರ ಮಾಡಲಾಗಿದೆ. ಈ ಮೂಲಕ ಬಿಸಿಯೂಟ ಯೋಜನೆಗೆ 280 ಕೋಟಿ ನೀಡಲು ನಿರ್ಧರಿಸಲಾಗಿದ್ದು, ಈ ಯೋಜನೆ ಇದೀಗ 9 ಮತ್ತು 10ನೇ ತರಗತಿಗೂ ವಿಸ್ತರಣೆಯಾಗಲಿದೆ.
ಬಜೆಟ್‌ನಲ್ಲಿ ಇಲಾಖಾವಾರು ಅನುದಾನ ಹಂಚಿಕೆ ವಿವರ
ಬೆಂಗಳೂರು: ಸಿದ್ದರಾಮಯ್ಯನವರ 14 ನೇ ಬಜೆಟ್‌ನಲ್ಲಿ ಯಾವ ಯಾವ ಇಲಾಖೆಗೆ ಎಷ್ಷೇಷ್ಟು ಅನುದಾನ ನೋಡುವುದಾದರೆ ‘ಶಿಕ್ಷಣ ಇಲಾಖೆ 37,000 ಕೋಟಿ ಅನುದಾನ ಮೀಸಲು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ & ತೋಟಗಾರಿಕೆ ಇಲಾಖೆ 5,800 ಕೋಟಿ ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.
ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆಗೆ 6 ಕೋಟಿ ಮೀಸಲು
ಬೆಂಗಳೂರು: ಪುನೀತ್ ರಾಜಕುಮಾರ್ ಸ್ಮರಣಾರ್ಥ ಆರೋಗ್ಯ ವ್ಯವಸ್ಥೆ ಕಲ್ಪಿಸಲು ಸರ್ಕಾರ 6 ಕೋಟಿ ರೂಪಾಯಿ ಮೀಸಲಿಟ್ಟಿದೆ. ಹಠಾತ್ ಹೃದಯಾಘಾತ ತಪ್ಪಿಸಲು ಆಸ್ಪತ್ರೆಗಳಲ್ಲಿ ಎಇಡಿ ವ್ಯವಸ್ಥೆ ಮಾಡಲಾಗಿದೆ.

Karnataka Budget 2023 Live: ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಅನುಮೋದನೆ
ಬೆಂಗಳೂರು: ವಿಜಯಪುರದಲ್ಲಿ ಹೊಸ ವಿಮಾನ ನಿಲ್ದಾಣ ಯೋಜನೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಅನುಮೋದನೆ ನೀಡಿದೆ. ಜೊತೆಗೆ ಕನಕಪುರದಲ್ಲಿ ಮೆಡಿಕಲ್ ಕಾಲೇಜ್ ನಿರ್ಮಾಣಕ್ಕೆ ಅಸ್ತು ಹೇಳಲಾಗಿದೆ. ಎಲ್ಲಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ನಿರ್ಮಾಣ ಮಾಡಲು ನಿರ್ಧಾರ ಮಾಡಲಾಗಿದೆ.
ಗ್ಯಾರಂಟಿಗಳ ಜಾರಿಗೆ ಶೇ. 26ರಷ್ಟು ಸಾಲ ಪಡೆಯಲು ನಿರ್ಧಾರ
ಬೆಂಗಳೂರು: ಗ್ಯಾರಂಟಿಗಳ ಜಾರಿಗೆ ಶೇ. 26ರಷ್ಟು ಸಾಲ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರದಿಂದ ಶೇಕಡಾ 4ರಷ್ಟು ಅನುದಾನದ ನಿರೀಕ್ಷೆಯಿದ್ದು, ಶೇಕಡ.50ರಷ್ಟು ತೆರಿಗೆ ಆದಾಯದಿಂದ ಹಣ ಹೊಂದಿಸಲು ನಿರ್ಧಾರ ಮಾಡಲಾಗಿದೆ ಎಂದರು.
ಪ್ರಮುಖ 3 ಇಲಾಖೆಗಳಿಂದ 1,62,000 ಕೋಟಿ ತೆರಿಗೆ ಹಣ ಸಂಗ್ರಹದ ಗುರಿ
ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ತೆರಿಗೆ ಸಂಗ್ರಹದ ಗುರಿಯನ್ನ ಸರ್ಕಾರ ಹೊಂದಿದೆ.
- Karnataka Budget 2023 Live: ಪ್ರಮುಖ 3 ಇಲಾಖೆಗಳಿಂದ 1,62,000 ಕೋಟಿ ತೆರಿಗೆ ಹಣ ಸಂಗ್ರಹದ ಗುರಿಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಿಂದ 1,01,000 ಲಕ್ಷ ಕೋಟಿ, ಅಬಕಾರಿ ಇಲಾಖೆಯಿಂದ 36,000 ಕೋಟಿ, ನೋಂದಣಿ & ಮುದ್ರಾಂಕ ಇಲಾಖೆಯಿಂದ 25,000 ಕೋಟಿ ಸೇರಿ ಒಟ್ಟು 1,62,000 ಕೋಟಿ ತೆರಿಗೆ ಸಂಗ್ರಹದ ಗುರಿಯನ್ನ ಸರ್ಕಾರ ಹೊಂದಿದೆ.
- 07 Jul 2023 12:49 PM (IST)Karnataka Budget 2023 Live: ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಅನುದಾನಬೆಂಗಳೂರು: ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.
- 07 Jul 2023 12:40 PM (IST)Karnataka Budget 2023 Live: ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರಬೆಂಗಳೂರು: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.
- 07 Jul 2023 12:34 PM (IST)Karnataka Budget 2023 Live: ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಿಸಿದ ಸಿಎಂಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ. ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.