ರಾಜ್ಯದ ಇ-ಕಾಮರ್ಸ್ ಗಿಗ್ ವರ್ಕರ್ಸ್‌ಗಳಾದ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಇತರೆ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್‌ಗಳಿಗೆ) 4 ಲಕ್ಷ ರೂವರೆಗೆ ವಿಮೆ ಕಂತನ್ನು ಸರ್ಕಾರ ಭರಿಸಲಿದೆ.
Ashraf Kammaje
Updated on: Jul 07, 2023 | 2:01 PM

ಬೆಂಗಳೂರು (ಜು.07)): ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಾಗಿ ದುಡಿಯುತ್ತಿರುವ ಗಿಗ್ ವರ್ಕರ್ಸ್‌ಗಳಾದ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳ ನೌಕರರಿಗೆ (ಡೆಲಿವರಿ ಬಾಯ್‌ಗಳಿಗೆ) 2 ಲಕ್ಷ ರೂ.ಗಳ ಜೀವವಿಮಾ ಹಾಗೂ 2 ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿ ಒಟ್ಟು 4 ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು. ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಅಸಂಘಟಿತ ವಲಯಗಳಲ್ಲಿ ದುಡಿಯುತ್ತಿರುವ ‘Gig workers’, ಅಂದರೆ ಸ್ವಿಗ್ಗಿ, ಜೊಮಾಟೋ, ಅಮೆಜಾನ್, ಮುಂತಾದ ಇ-ಕಾಮರ್ಸ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ/ಅರೆಕಾಲಿಕ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಟಿಯಿಂದ, ಇಂತಹವರಿಗೆ ಎರಡು ಲಕ್ಷ ರೂ.ಗಳ ಜೀವವಿಮಾ ಸೌಲಭ್ಯ ಹಾಗೂ ಎರಡು ಲಕ್ಷ ರೂ.ಗಳ ಅಪಘಾತ ವಿಮಾ ಸೌಲಭ್ಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ರೂ.ಗಳ ವಿಮಾ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಇದರ ಸಂಪೂರ್ಣ ವಿಮಾ ಕಂತನ್ನು ಸರ್ಕಾರದ ವತಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.