
ಮಂಗಳೂರು, ಜು 09 (HAYATH TV): ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮುಳಿಹಿತ್ಲುವಿನ ಅಂಗಡಿಯೊಂದರಲ್ಲಿ ಕೆಲಸಕ್ಕಿದ್ದ ಯುವಕ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ.
ಜಗ್ಗು (35) ಕೊಲೆಯಾದ ಯುವಕನಾಗಿದ್ದು, ಆರೋಪಿ ಆರೋಪಿ ತೌಸಿಫ್ ಹುಸೈನ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಶನಿವಾರ ಬೆಳಗ್ಗೆ ತನ್ನ ಸ್ಟೋರಿನಲ್ಲಿ ಕೆಲಸಕ್ಕಿದ್ದ ಜಗ್ಗುವನ್ನು ಕ್ಷುಲ್ಲಕ ಕಾರಣಕ್ಕೆ ಆತನನ್ನು ಕೊಲೆ ಮಾಡುವ ಉದ್ದೇಶದಿಂದ ಬೆಂಕಿ ಕೊಟ್ಟು ಸುಟ್ಟು ನಂತರ ಸಾಕ್ಷಿ ನಾಶ ಮಾಡುವ ಹಾಗೂ ಪ್ರಕರಣದಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಅಪರಾಹ್ನ 1.30 ರ ಸುಮಾರಿಗೆ ಅಂಗಡಿಯ ಸುತ್ತಮುತ್ತಲಿನ ಸಾರ್ವಜನಿಕರಿಗೆ ವಿದ್ಯುತ್ ಸ್ಪರ್ಶವಾಗಿರುವುದಾಗಿ ತೌಸಿಫ್ ಹೇಳಿದ್ದಾನೆ.
ಇನ್ನು ತಕ್ಷಣ ಸ್ಥಳೀಯರು ಜಗ್ಗುವನ್ನು ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ಕರಕೊಂಡು ಹೋದಾಗ ಆದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ನಂತರ ಪ್ರಕರಣ ದಾಖಲು ಮಾಡಿಕೊಂಡ ಪಾಂಡೇಶ್ವರ ಪೊಲೀಸರು ತನಿಖೆಯನ್ನು ಆರಂಭಿಸಿದ್ದು, ಆ ಸಂದರ್ಭ ಪರಿಸರದ ಸಾರ್ವಜನಿಕರನ್ನು ವಿಚಾರಿಸಿದಾಗ ಜಗ್ಗುವನ್ನು ಸ್ಟೋರ್ ಮಾಲಿಕ ತೌಸಿಫನೇ ಕೊಲೆ ಮಾಡಿದ್ದರ ಬಗ್ಗೆ ಬಲವಾದ ಸಾಕ್ಷ್ಯಗಳು ದೊರೆತ್ತಿದ್ದು ಆರೋಪಿ ತೌಸಿಫ್ ಹುಸೈನ್ ಪೊಲೀಸರು ಬಂಧಿಸಿದ್ದಾರೆ.
