ಬೆಳ್ತಂಗಡಿ, ಜು 12 (HAYATH TV): ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಹರೀಶ್ ಪೂಜಾರಿ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಬಜಿರೆ ಗ್ರಾಮದ ಕೊರಗಕಲ್ಲು ಸ್ವಾಮಿ ಕೊರಗಜ್ಜ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿದ ಆರೋಪದಲ್ಲಿ ವೇಣೂರು ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಅಧ್ಯಕ್ಷ ಪ್ರದೀಪ್ ಕುಮಾರ್ ಹೆಗ್ಡೆ ನೀಡಿದ ದೂರಿನಲ್ಲಿ ಹರೀಶ್ ಪೂಜಾರಿ, ಡಾ.ರಾಜೇಶ್ , ರಮೇಶ್ ಕುಡ್ಮೇರು, ಓಂ ಪ್ರಕಾಶ್, ಮತ್ತು ಪ್ರಶಾಂತ್ ರವರ ಕುಮ್ಮಕ್ಕಿನಿಂದ ಚಪ್ಪರಕ್ಕೆ ಬೆಂಕಿ ಕೊಟ್ಟು ಆರಾಧನಾ ಕೇಂದ್ರಕ್ಕೆ ಹಾನಿ ಉಂಟು ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿರುತ್ತಾರೆ ಎಂದು ತಿಳಿಸಿದ್ದಾರೆ. ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.