
ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಂಪ್ಲಾಪುರ ಬಳಿ ನಡೆದಿದೆ.ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು.ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುವಾಗ ಕಂಪ್ಲಾಪುರ ಬಳಿ ಇಂದು( ಜುಲೈ 18) ಮುಂಜಾನೆ 4.30ಕ್ಕೆ ಈ ದುರ್ಘಟನೆ ಸಂಭವಿಸಿದೆ

ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು.



