
ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ವಿದೇಶಗಳಿಂದ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು (ಜು.24): ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಹುಮತದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ವಿದೇಶಗಳಿಂದ ಕುಳಿತು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರವಾಗಿದೆ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಅಂತ, ಈಗ ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡ್ತಿದ್ದಾರೆ ಎಂದು ನೇರವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಮೇಲೆ ಆರೋಪ ಮಾಡಿದ್ದಾರೆ.
