
ವಿಟ್ಲ: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯ ಮೇಲೆ ಐವರು ಅತ್ಯಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ವಿಟ್ಲದ ಪೆರುವಾಯಿ ಗ್ರಾಮದ ಎಸ್.ಟಿ ಸಮುದಾಯದ 16 ವರ್ಷದ ಬಾಲಕಿಯ ಮೇಲೆ ಐವರು ಯುವಕರು ಬೇರೆ ಬೇರೆ ಸಮಯದಲ್ಲಿ ಈಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ.

ಶನಿವಾರ ಈಕೆಯ ನಡವಳಿಕೆ ಬಗ್ಗೆ ಪೋಷಕರು ಗಮನಿಸಿದಾಗ ಘಟನೆ ಬೆಳಕಿಗೆ ಬಂದಿದೆ.ಶನಿವಾರ ವಿಟ್ಲ ಠಾಣೆಗೆ ಆಗಮಿಸಿದ ಪೋಷಕರು ಘಟನೆಯ ಬಗ್ಗೆ ವಿಟ್ಲ ಮೂಲದ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ
