Hayath Tv Digital Desk| Edited By: Ashraf Kammaje
Updated on: Aug 03, 2023 | 3:27 PM

ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಯ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ
ಮಂಗಳೂರು, ಆ.03: ಅಮೃತ್ ಭಾರತ್ ರೈಲು(Amrit Bharat Rail) ನಿಲ್ದಾಣ ಯೋಜನೆ ಅಡಿಯಲ್ಲಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಅಂತಾರಾಷ್ಟ್ರೀಯ ದರ್ಜೆಯ ರೈಲು ನಿಲ್ದಾಣವಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಹೀಗಾಗಿ ಈ ಕಾಮಗಾರಿಗೆ ಆ.6 ರಂದು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣವನ್ನಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಅಭಿನಂದನೆಗಳು. ಅಮೃತ್ ಭಾರತ್ ರೈಲ್ವೆ ಯೋಜನೆಯಡಿ 19.32 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ಈ ಯೋಜನೆಯು ಕರಾವಳಿ ಭಾಗದಲ್ಲಿ ಬಹುದೊಡ್ಡ ಮೈಲಿಗಲ್ಲು ಆಗಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪೋಸ್ಟ್ ಹಂಚಿಕೊಂಡಿದ್ದಾರೆ.

2023-24ನೇ ಸಾಲಿನ ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ, ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿ ಅಭಿವೃದ್ಧಿ ಪಡಿಸುವುದಾಗಿ ಹಣಕಾಸು ಸಚಿವೆ ನಿರ್ಮಲಾ ಘೋಷಿಸಿದ್ದರು.
