| Edited By:Ashraf Kammaje
Updated on: Aug 03, 2023 | 8:08 PM

Kalaburagi News; ಖರ್ಗೆ ಅವರ ಬೆಂಬಲಿಗ ರಾಜೀವ್ ಜಾನೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಕಲಬುರಗಿ, ಆಗಸ್ಟ್ 3: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಚಾರವಾಗಿ ಮಾಜಿ ಗೃಹ ಸಚಿವ, ಬಿಜೆಪಿ ನಾಯಕಅರಗ ಜ್ಯಾನೇಂದ್ರ (Araga Jnanendra) ವಿರುದ್ಧ ಪ್ರಕರಣ ದಾಖಲಾಗಿದೆ. ಕಲಬುರಗಿ (Kalaburagi) ನಗರದ ಅಶೋಕ್ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಖರ್ಗೆ ಅವರ ಬೆಂಬಲಿಗ ರಾಜೀವ್ ಜಾನೆ ನೀಡಿದ ದೂರಿನ ಮೇರೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಆರಗ ಜ್ಞಾನೇಂದ್ರ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಕೂಡ ಆಕ್ಷೇಪ ವ್ಯಕ್ತಪಡಿಸಿತ್ತು. ಆರಗ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ಗೆ ಪತ್ರ ಬರೆದಿತ್ತು. ಈ ಮಧ್ಯೆ, ದಲಿತ ಮುಖಂಡ ಹರ್ಷೇಂದ್ರ ಕುಮಾರ್ ಎನ್ನುವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆರಗ ಜ್ಞಾನೇಂದ್ರ ವಿರುದ್ಧ ಜಾತಿ ನಿಂದನೆ ದೂರು ದಾಖಲಿಸಿದ್ದಾರೆ.
