Ashraf Kammaje|
Updated on:Aug 07, 2023 | 9:38 AM

World Cup 2023: ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರನ್ನೊಳಗೊಂಡ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಅಕ್ಟೋಬರ್ 5 ರಿಂದ ಭಾರತದಲ್ಲಿ ಆರಂಭವಾಗಲಿರುವ ಏಕದಿನ ವಿಶ್ವಕಪ್ಗೆ ಕ್ರಿಕೆಟ್ ಆಸ್ಟ್ರೇಲಿಯಾ 15 ಸದಸ್ಯರನ್ನೊಳಗೊಂಡ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಬಲಿಷ್ಠ ಪಡೆಯ ನಾಯಕತ್ವ ಎಂದಿನಂತೆ ಆಲ್ರೌಂಡರ್ ಪ್ಯಾಟ್ ಕಮಿನ್ಸ್ ಅವರಿಗೆ ವಹಿಸಲಾಗಿದೆ. ಇನ್ನು ಇದೇ ತಂಡ ದಕ್ಷಿಣ ಆಫ್ರಿಕಾದಲ್ಲಿ ನಡೆಯಲ್ಲಿರುವ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಆ ಬಳಿಕ ಭಾರತದಲ್ಲಿ ನಡೆಯಲ್ಲಿರುವ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಪ್ರಸ್ತುತ 18 ಸದಸ್ಯರ ತಂಡ ಪ್ರಕಟವಾಗಿದ್ದು, ಏಕದಿನ ವಿಶ್ವಕಪ್ ದೃಷ್ಟಿಯಿಂದ ತಂಡವನ್ನು 15 ಸದಸ್ಯರಿಗೆ ಸೀಮಿತಗೊಳಿಸುವ ನಿರೀಕ್ಷೆ ಇದೆ. ಅನುಭವಿಗಳು ಹಾಗೂ ಯುವಕರಿಂದ ಕೂಡಿರುವ ಈ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಮಾರ್ನಸ್ ಲಬುಶೆನ್ ವಿಫಲರಾಗಿದ್ದರೆ, ಅನುಭವಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ಗೆ ಆಯ್ಕೆ ಮಂಡಳಿ ಮತ್ತೊಮ್ಮೆ ಮಣೆ ಹಾಕಿದೆ.

ಇನ್ನು ಆ್ಯಶಸ್ ಟೆಸ್ಟ್ ಸರಣಿಯ ಐದನೇ ಟೆಸ್ಟ್ ಪಂದ್ಯದಲ್ಲಿ ಮಣಿಕಟ್ಟಿನ ಇಂಜುರಿಗೆ ತುತ್ತಾಗಿದ್ದ ಏಕದಿನ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮುಂದಿನ ತಿಂಗಳು ಭಾರತದಲ್ಲಿ ನಡೆಯಲ್ಲಿರುವ ಏಕದಿನ ಸರಣಿಯಲ್ಲಿ ಆಡುವುದು ಅನುಮಾನ ಎಂದು ಹೇಳಲಾಗಿತ್ತು. ಆದರೆ ಇದೀಗ ಏಕದಿನ ವಿಶ್ವಕಪ್ಗೆ ತಂಡವನ್ನು ಪ್ರಕಟಿಸಿರುವ ಕ್ರಿಕೆಟ್ ಆಸ್ಟ್ರೇಲಿಯಾ, ತಂಡವನ್ನು ಕೇವಲ ಎರಡು ಏಕದಿನ ಪಂದ್ಯಗಳಲ್ಲಿ ಮುನ್ನಡೆಸಿರುವ ಕಮಿನ್ಸ್ಗೆ ತಂಡದ ನಾಯಕತ್ವ ನೀಡಿದೆ. ಇನ್ನು ಇದೇ ಕಮಿನ್ಸ್ ಕೊನೆಯ ಬಾರಿಗೆ ನವೆಂಬರ್ 2022 ರಲ್ಲಿ ತಂಡದ ಪರ ಏಕದಿನ ಪಂದ್ಯವನ್ನಾಡಿದ್ದರು.

