Ashraf Kammaje |
Updated on:Aug 14, 2023 | 3:33 PM

ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್ಐಆರ್ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್ ಆದೇಶ ನೀಡಿದೆ.
ಸೋಶಿಯಲ್ ಮೀಡಿಯಾದಲ್ಲಿ ಜಾತಿ ನಿಂದನೆ ಪದ ಬಳಿಸಿದ ಆರೋಪವನ್ನು ಎದುರಿಸುತ್ತಿದ್ದ ನಟ ಉಪೇಂದ್ರ ಅವರು ಈಗ ನಿಟ್ಟುಸಿರು ಬಿಡುವಂತೆ ಆಗಿದೆ. ಅವರ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ತಡೆ ನೀಡಿ ಹೈಕೋರ್ಟ್ ಆದೇಶಿಸಿದೆ. ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತಮ್ಮ ವಿರುದ್ಧ ಹಾಕಲಾಗಿದ್ದ ಎಫ್ಐಆರ್ಗೆ ತಡೆ ನೀಡಬೇಕು ಎಂದು ಕೋರಿ ಉಪೇಂದ್ರ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈಗ ಅವರ ಪರವಾಗಿ ಕೋರ್ಟ್ ಆದೇಶ ನೀಡಿದೆ.

ಇತ್ತೀಚೆಗೆ ಪ್ರಜಾಕೀಯದ ಬಗ್ಗೆ ಮಾತನಾಡಲು ಸೋಶಿಯಲ್ ಮೀಡಿಯಾದಲ್ಲಿ ಉಪೇಂದ್ರ ಅವರು ಲೈವ್ ಬಂದಿದ್ದರು. ಈ ವೇಳೆ ಅವರು ಬಳಸಿದ್ದ ಗಾದೆ ಮಾತಿನಿಂದ ಜಾತಿ ನಿಂದನೆ ಆಗಿದೆ ಎಂಬ ಆರೋಪ ಕೇಳಿಬಂತು. ಹಾಗಾಗಿ ಅವರ ವಿರುದ್ಧ ದೂರು ದಾಖಲಿಸಲಾಯಿತು. ಜನರಿಂದ ತೀವ್ರ ಆಕ್ಷೇಪ ಎದುರಾದ ಹಿನ್ನೆಲೆಯಲ್ಲಿ ಉಪೇಂದ್ರ ಅವರು ಕ್ಷಮೆ ಕೇಳಿದ್ದರು ಮತ್ತು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದರು.

ಉಪೇಂದ್ರ ಮನೆಗೆ ಬಿಗಿ ಭದ್ರತೆ:
ಜಾತಿ ನಿಂದನೆ ಆರೋಪ ಎದುರಾದ ಬಳಿಕ ಉಪೇಂದ್ರ ಅವರ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅನೇಕರು ಕಿಡಿಕಾರಲು ಆರಂಭಿಸಿದರು. ಈಗ ಉಪೇಂದ್ರ ಅವರ ಮನೆಗೆ ಪೊಲೀಸರು ಬಿಗಿ ಭದ್ರತೆ ನೀಡಿದ್ದಾರೆ. ಬೆಂಗಳೂರಿನ ಕತ್ತರಿಗುಪ್ಪೆ ಮತ್ತು ಸದಾಶಿವ ನಗರದ ತಮ್ಮ ನಿವಾಸದಲ್ಲಿ ಉಪೇಂದ್ರ ಇಲ್ಲ ಎಂದು ಹೇಳಲಾಗುತ್ತಿದೆ. ಆದರೂ ಮುಂಜಾಗೃತ ಕ್ರಮವಾಗಿ ಪೊಲೀಸರು ಭದ್ರತೆ ಒದಗಿಸಿದ್ದಾರೆ.