
ಕಾರವಾರ: ಲೋಕಸಭಾ ಚುನಾವಣೆ (Lok Sabha Election) ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಪರೇಷನ್ ಹಸ್ತ ಶುರುವಾಗಿದೆ. ಗೆಲುವೊಂದೇ ಗುರಿಯಾಗಿಸಿಕೊಂಡಿರುವ ಕಾಂಗ್ರೆಸ್ ನಂಬರ್ ಗೇಮ್‌ನತ್ತ ಟಾರ್ಗೆಟ್ ಹಾಕಿಕೊಂಡಿದೆ. ಅದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್‌ನಿಂದ (BJP-JDS) ಎಷ್ಟೇ ಜನ ಬಂದರೂ ಬಾಗಿಲು ಓಪನ್‌ಗೆ ಸೀಕ್ರೆಟ್ ಆಪರೇಷನ್‌ಗೆ ಮುಂದಾಗಿದೆ. ಜೊತೆಗೆ ಮೂಲ ಕಾಂಗ್ರೆಸ್ಸಿಗರನ್ನ ಪಕ್ಷಕ್ಕೆ ಕರೆತರುವ ಪ್ರಯತ್ನವೂ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಕೂಡ ಪಕ್ಷ ತೊರೆಯಲು ಸಜ್ಜಾಗಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿವೆ. ಕಮಲ ಬಿಟ್ಟು ಕೈ ಹಿಡಿಯಲು ಹೆಬ್ಬಾರ್, ಬೆಂಬಲಿಗರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಈ ಬಗ್ಗೆ ಬೆಂಬಲಿಗರೊಂದಿಗೆ ಮುಂಡಗೋಡಿನಲ್ಲಿ ರಾತ್ರಿ ರಹಸ್ಯ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರೆ ಆಗುವ ಅನುಕೂಲದ ಬಗ್ಗೆ ಚರ್ಚೆ ಸಹ ನಡೆಸಿದ್ದಾರೆ ಎನ್ನಲಾಗಿದೆ

ಶಿವರಾಮ್ ಹೆಬ್ಬಾರ್ ಬೆಂಬಲಿಗರೂ ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಬೆಂಗಳೂರಿಗೆ ಹೋದ್ಮೇಲೆ ಮಾತಾಡ್ತೀನಿ ಅಂತಾ ಹೇಳಿದ್ದಾರೆ. ಸದ್ಯಕ್ಕೆ ಶಿವರಾಮ್ ಹೆಬ್ಬಾರ್ ನಡೆ ಕೂಡ ಸಸ್ಪೆನ್ಸ್ ಆಗಿದೆ

ಈ ಸಂಬಂಧ ಶುಕ್ರವಾರ ಯಲ್ಲಾಪುರದಲ್ಲಿ ಮಾತನಾಡಿರುವ ಶಿವರಾಮ್ ಹೆಬ್ಬಾರ್, ನಾನು ಎಲ್ಲೂ ಸಭೆ ಮಾಡಿಲ್ಲ. ಕಾರ್ಯಕರ್ತರ ಜೊತೆ ಸಭೆ ಮಾಡುವುದು ನನ್ನ ಕರ್ತವ್ಯ ಮಾಡಿದ್ದೇನೆ. ಯಡಿಯೂರಪ್ಪ ನೇತ್ರತ್ವದಲ್ಲಿ ನಾವು ಪಕ್ಷಕ್ಕೆ ಬಂದಿದ್ದೇವೆ. ನಮ್ಮ ಅಹವಾಲನ್ನ ವರಿಷ್ಠರ ಗಮನಕ್ಕೆ ತಂದಿದ್ದೇನೆ. ನಮಗೆ ಇರುವ ಆತಂಕ ಹಂಚಿಕೊಂಡಿದ್ದೇವೆ. ಏನು ಹೇಳಬೇಕು ಅದನ್ನು ಹೇಳಿದ್ದೇವೆ. ಮುಚ್ಚಿಡುವುದು ಯಾವುದೂ ಇಲ್ಲ. ವರಿಷ್ಟರೇ ನಿರ್ಣಯ ಮಾಡಬೇಕು. ಯಡಿಯೂರಪ್ಪನವರು ಬೊಮ್ಮಾಯಿ ಸಹ ಅನ್ಯಾಯ ಮಾಡಿಲ್ಲ. ಪಕ್ಷದಲ್ಲಿ ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಆಗಬೇಕು. ಕಾಂಗ್ರೆಸ್ ಪಕ್ಷದಿಂದ ಯಾರನ್ನೂ ಸಂಪರ್ಕ ಮಾಡಿಲ್ಲ, ಪಕ್ಷ ಸೇರುವ ಬಗ್ಗೆ ಚರ್ಚೆ ನಡೆದಿಲ್ಲ. ಈಗ ಪಕ್ಷದಲ್ಲೇ ಇದ್ದೀನಿ ಎಂದು ಮತ್ತೆ ಕುತೂಹಲ ಕೆರಳಿಸಿದ್ದಾರೆ.
